ಇಂದು ಅಳಕೆಮಜಲು ಕಿ.ಪ್ರಾ. ಶಾಲೆಯಲ್ಲಿ ಬೆಳ್ಳಿ ಹಬ್ಬ ಸಂಭ್ರಮ, ನೂತನ ಕೊಠಡಿಗಳ ಉದ್ಘಾಟನೆ, ಸಾಧಕರಿಗೆ ಸನ್ಮಾನ

0

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಅಳಕೆಮಜಲು ಕಿ.ಪ್ರಾ. ಶಾಲಾ ಬೆಳ್ಳಿ ಹಬ್ಬ ಸಂಭ್ರಮ, ಶಾಸಕರ ಅನುದಾನ ದಿಂದ ಹಾಗೂ ಎಂ.ಆರ್.ಪಿ.ಎಲ್.ನ ಸಿ.ಎಸ್.ಆರ್. ನಿಧಿಯಿಂದ ನಿರ್ಮಾಣಗೊಂಡ ನೂತನ ಕೊಠಡಿಗಳ ಉದ್ಘಾಟನೆ ಹಾಗೂ ಸನ್ಮಾನ ಕಾರ್ಯಕ್ರಮ ಡಿ.೩ರಂದು ಬೆಳಗ್ಗೆ ಶಾಲಾ ವಠಾರದಲ್ಲಿ ನಡೆಯಲಿದೆ.

ತರಗತಿ ಕೊಠಡಿಗಳನ್ನು ಶಾಸಕರಾದ ಸಂಜೀವ ಮಠಂದೂರುರವರು ಉದ್ಘಾಟಿಸಲಿದ್ದಾರೆ. ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಂ.ಸುಧೀರ್ ಕುಮಾರ್ ಶೆಟ್ಟಿರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಯಶೋಧರವರು ಗ್ರಂಥಾಲಯ ಉದ್ಘಾಟನೆ ಮಾಡಲಿದ್ದಾರೆ. ಅಳಕೆಮಜಲು ಜುಮ್ಮಾ ಮಸ್ಜೀದ್ ನ ಆಡಳಿತ ಸಮಿತಿ ಕೋಶಾಧಿಕಾರಿ ಅಬ್ದುಲ್ ರಹಿಮಾನ್ ಹಾಜಿರವರು ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವಿಧ ಕ್ಷೇತ್ರದ ಗಣ್ಯರು ಆಗಮಿಸಲಿದ್ದಾರೆ. ಅಪರಾಹ್ನ ೩ಗಂಟೆಯಿಂದ ಶಾಲಾ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here