ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ, ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಅಟಲ್ ಟಿಂಕರಿಂಗ್ ಲ್ಯಾಬ್‌ನ ಸಹಯೋಗದೊಂದಿಗೆ ಜ್ಞಾನಹಬ್ಬ “ರಾಮನ್‌ಷಿಯಾ” ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.
ಕಿದು ಸಿ.ಪಿ.ಸಿ.ಆರ್.ಐ ಸಂಶೋಧನಾ ಕೇಂದ್ರದ ತಾಂತ್ರಿಕ ಅಧಿಕಾರಿ ಡಾ| ಗೋಪಾಲಕೃಷ್ಣ ಎ.ಎಸ್. ಅವರು ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ವಿಶೇಷತೆಗಳಾದ ವಿಜ್ಞಾನ ಪಾರ್ಕ್, ವಿಜ್ಞಾನ ಪ್ರಯೋಗಾಲಯ, ಬ್ರಹ್ಮಗುಪ್ತ ಗಣಿತ ಪ್ರಯೋಗಾಲಯ, ರೊಬೊಟಿಕ್ಸ್ ಪ್ರಾತ್ಯಕ್ಷಿಕೆ, ಕ್ರೀಡಾ ವಿನೋದಗಳು, ಎನ್.ಎಮ್.ಎಮ್.ಎಸ್. ಪರೀಕ್ಷೆಗೆ ಪೂರ್ವ ತಯಾರಿ ಮುಂತಾದ ವಿಷಯಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು. ವಿದ್ಯಾರ್ಥಿಗಳ ಮನೋರಂಜನೆಗಾಗಿ ಪಟ್ಟಾಭಿರಾಮ್ ಅವರಿಂದ ಮಿಮಿಕ್ರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪರಿಸರದ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರು ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಮುಖ್ಯಗುರು ಸತೀಶ್ ಭಟ್‌ರವರು ಸ್ವಾಗತಿಸಿದರು.