ಹಿರೇಬಂಡಾಡಿ ಶಾಲಾ ಭೋಜನ ಶಾಲೆ, ತರಗತಿ ಕೊಠಡಿಗಳ ಉದ್ಘಾಟನೆ, ವಾರ್ಷಿಕೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

0

ಹಿರೇಬಂಡಾಡಿ: ಹಿರೇಬಂಡಾಡಿ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಿರ್ಮಾಣಗೊಂಡಿರುವ ಶಾಲಾ ಅಕ್ಷರದಾಸೋಹ ಭೋಜನ ಶಾಲೆ ಮತ್ತು ತರಗತಿ ಕೊಠಡಿಗಳ ಉದ್ಘಾಟನೆ, ನೂತನ ಕೊಠಡಿಗೆ ಶಿಲಾನ್ಯಾಸ ಮತ್ತು ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಡಿ.2ರಂದು ಬಿಡುಗಡೆಗೊಳಿಸಲಾಯಿತು.


ಶಾಸಕ ಸಂಜೀವ ಮಠಂದೂರು ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸೋಮೇಶ್, ಎಸ್‌ಡಿಎಂಸಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಬಾಬು ಟಿ.,ಸ್ವಾಗತಿಸಿ, ಶಿಕ್ಷಕ ಕೃಷ್ಣಮೂರ್ತಿ ವಂದಿಸಿದರು.

LEAVE A REPLY

Please enter your comment!
Please enter your name here