ನೆಲ್ಯಾಡಿ: ಕೌಕ್ರಾಡಿ ಗ್ರಾಮ ಪಂಚಾಯತ್ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, 2023-24ನೇ ಸಾಲಿನ ಕಾರ್ಮಿಕರ ಆಯವ್ಯಯ ತಯಾರಿಸಲು ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನ ಮತ್ತು ಜಲ ಸಂಜೀವಿನಿ ಕಾರ್ಯಕ್ರಮ, ಮಹಿಳೆಯ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾದ ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನ ಹಾಗೂ ವಿಶೇಷ ಮಹಿಳಾ ಗ್ರಾಮಸಭೆ ನ.24ರಂದು ಕೌಕ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಮಹಿಳೆಯರಿಗೆ ನರೇಗಾ ಯೋಜನೆಯ ಜಲಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ವೈಜ್ಞಾನಿಕವಾಗಿ ಯೋಜನೆಯನ್ನು ತಯಾರಿಸುವ ಉದ್ದೇಶದ ಕುರಿತು ಮಾಹಿತಿ ನೀಡಲಾಯಿತು.
ಕಡಬ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಸಜಿ ಕುಮಾರ್ ಅವರು ನೋಡೆಲ್ ಅಧಿಕಾರಿಯಾಗಿದ್ದರು. ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಸಹಾಯಕಿ ಸವಿತಾ ಲೋಬೋ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಪುಷ್ಪಾವತಿ, ಜಲಜೀವನ್ ಯೋಜನೆಯ ಮಹಾಂತೇಶ್ ಹಿರೇಮಠ್‌ರವರು ಮಾಹಿತಿ ನೀಡಿದರು. ಗ್ರಾ.ಪಂ.ಅಧ್ಯಕ್ಷೆ ವನಿತಾ ಎಂ., ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಜಿ.ಭವಾನಿ, ಸದಸ್ಯರಾದ ಜನೀಫ್, ಲೋಕೇಶ್ ಬಾಣಜಾಲು, ಉದಯಕುಮಾರ್, ಶೈಲಾ, ಡೈಸಿವರ್ಗೀಸ್, ದೇವಕಿ, ಸವಿತಾ ಸರ್ವೋತ್ತಮ, ಮಹೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಿಡಿಒ ಮಹೇಶ್ ಜಿ.ಎನ್.,ಸ್ವಾಗತಿಸಿ ಮಾಹಿತಿ ನೀಡಿದರು. ಕಾರ್ಯದರ್ಶಿ ದೇವಿಕಾ ಎಂ., ವಂದಿಸಿದರು.