ಶಾಂತಿನಗರ: ನಿವೃತ್ತ ಶಿಕ್ಷಕಿ ಸುಲೋಚನರಾವರಿಗೆ ಬೀಳ್ಕೊಡುಗೆ

0

ಶಾಂತಿನಗರ: ೩೪ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಹಿ.ಪ್ರಾ.ಶಾಲೆಯಲ್ಲಿ ೧೬ ವರ್ಷ ಸೇವೆ ಸಲ್ಲಿಸಿ ವಯೋನಿವೃತ್ತರಾದ ಶಿಕ್ಷಕಿ ಸುಲೋಚನಾರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.


ಶಾಂತಿನಗರ ಹಿ.ಪ್ರಾ.ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಶಾಂತ್, ಉಪಾದ್ಯಕ್ಷೆ ಸ್ವಪ್ನ ಜೀವನ್, ಸದಸ್ಯರಾದ ವಿಜಯ್ ಕುಮಾರ್, ವೇದಾವತಿ ಹಾಗೂ ಎಸ್‌ಡಿಎಂಸಿ ಉಪಾಧ್ಯಕ್ಷ ಭರತ್ ಕುಮಾರ್ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಮುನೀರ್ ಸನ್ಮಾನ ಪತ್ರ ನೀಡಿದರು. ಮುಖ್ಯ ಶಿಕ್ಷಕಿ ಜೆಸಿಂತಾ ಆನ್ಸಿ ಮಿನೇಜಸ್ ಸ್ಮರಣಿಕೆ ನೀಡಿ ಗೌರವಿಸಿದರು. ಬಳಿಕ ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕಿ ತಿಲಕ ಪಿ. ಉಡುಗೊರೆ ನೀಡಿ ಶುಭ ಹಾರೈಸಿದರು. ಶಿಕ್ಷಕಿಯರಾದ ದಿವ್ಯ ಮತ್ತು ರಕ್ಷಿತಾ ಸಹಕರಿಸಿದರು. ಶಾಂತಿನಗರ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಧನಲಕ್ಷ್ಮಿ, ಎಸ್‌ಡಿಎಂಸಿ ಸದಸ್ಯರು, ಎಸ್‌ಡಿಎಂಸಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಅಡುಗೆ ಸಿಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here