ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿರುವ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷರೂ ಅಮರ್ ಆಳ್ವ ಸೇವಾ ಟ್ರಸ್ಟ್ ಮುಖ್ಯಸ್ಥರೂ ಆಗಿರುವ ಕೃಪಾ ಅಮರ್ ಆಳ್ವರವರು ದ.4ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಅವರು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ.ರವರ ಉಪ್ಪಿನಂಗಡಿ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.