ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ಗೆ ಆಯ್ಕೆ; ಅಧ್ಯಕ್ಷ: ಗುಣರಂಜನ್ ಶೆಟ್ಟಿ, ಉಪಾಧ್ಯಕ್ಷ: ಸಹಜ್ ಜೆ.ರೈ

0

ಪುತ್ತೂರು:ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಜಯಕರ್ನಾಟಕ ಜನಪರ ವೇದಿಕೆಯ ಸ್ಥಾಪಕಾಧ್ಯಕ್ಷ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಯುವ ಉದ್ಯಮಿ ಸಹಜ್ ಜೆ.ರೈ ಆಯ್ಕೆಗೊಂಡಿದ್ದಾರೆ.

ಅಧ್ಯಕ್ಷ, ಉಪಾಧ್ಯಕ್ಷರ ಸಹಿತ ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಶನ್‌ನ 15 ಹುದ್ದೆಗಳಿಗೆ ಪದಾಧಿಕಾರಿಗಳು ಆಯ್ಕೆಯಾಗಿರುವುದನ್ನು ಚುನಾವಣಾಧಿಕಾರಿಯಾಗಿರುವ ನಿವೃತ್ತ ನ್ಯಾಯಾಧೀಶ ರಾಮಚಂದ್ರ ಎಂ.ಅವರು ಘೋಷಿಸಿದ್ದಾರೆ.

ಹಿರಿಯ ಉಪಾಧ್ಯಕ್ಷರಾಗಿ ಜಿ.ಎಸ್.ನ್ಯಾಮ್‌ಗೌಡ, ಉಪಾಧ್ಯಕ್ಷರಾಗಿ ಸಹಜ್ ಜೆ.ರೈ ಬಳೆಜ್ಜ, ಪ್ರಸಾದ್ ಶೆಟ್ಟಿ,ವೀರೇಶ್ ಕೆ.ಎಂ.,ಪ್ರಕಾಶ್ ಟಿ., ಯಶ್ವಂತ್ ಯಮನಪ್ಪನವರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಿವಾಸ ಜೆ., ಕೋಶಾಧಿಕಾರಿಯಾಗಿ ಶ್ರೀನಿವಾಸ ಅಂಗಾರಕೋಡಿ, ಜೊತೆ ಕಾರ್ಯದರ್ಶಿಗಳಾಗಿ ವಿನೋದ್ ಕುಮಾರ್ ಕೆ., ಉಮೇಶ್, ಕುಮಾರ್ ಜೆ., ಕಾರ್ಯನಿರ್ವಾಹಕ ಸದಸ್ಯರಾಗಿ ಸಂಜಯ್ ನಾಯಕ್, ವಿಶ್ವನಾಥ್ ಜೋತಿಭಾ ಪಾಟೀಲ್ ಮತ್ತು ಮಿಥುನ್ ದೇವಾಡಿಗ ಅವರು ಆಯ್ಕೆಗೊಂಡಿರುವುದಾಗಿ ಚುನಾವಣಾಧಿಕಾರಿ ರಾಮಚಂದ್ರ ಎಂ.ಅವರು ಘೋಷಿಸಿದ್ದಾರೆ.

ಬಿ.ಗುಣರಂಜನ್ ಶೆಟ್ಟಿ: ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಪರಿಸರವಾದಿ ಗುಣರಂಜನ್ ಶೆಟ್ಟಿ ಅವರು ಜಯಕರ್ನಾಟಕ ಜನಪರ ವೇದಿಕೆ, ಐಕೇರ್ ಬ್ರಿಗೇಡ್ ಮತ್ತು ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷರಾಗಿದ್ದಾರೆ. ಚಿಕ್ಕಮುಡ್ನೂರು ಉರಮಾಲು ನಿವಾಸಿಯಾಗಿದ್ದು ಬೆಳ್ಳಿಪ್ಪಾಡಿ ಮನೆತನದವರಾಗಿರುವ ಖ್ಯಾತ ಚಲನಚಿತ್ರ ನಟಿ ಅನುಷ್ಕಾ ಶೆಟ್ಟಿಯವರ ಸಹೋದರನಾಗಿರುವ ಗುಣರಂಜನ್ ಶೆಟ್ಟಿಯವರು ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗುಣರಂಜನ್ ಅವರನ್ನು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾದ ಉತ್ತರಪ್ರದೇಶದ ಕೇಶರ್ ಗಂಜ್‌ನ ಲೋಕಸಭಾ ಸದಸ್ಯ ಬ್ರಿಜ್ ಭೂಷಣ್ ಶರಣ್ ಸಿಂಗ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಯಕರ್ನಾಟಕ ಜನಪರ ವೇದಿಕೆಯ ಉಪಾಧ್ಯಕ್ಷ ಆರ್.ಚಂದ್ರಪ್ಪ, ಬೆಂಗಳೂರು ಜಿಲ್ಲಾಧ್ಯಕ್ಷ ಶ್ರೀನಿವಾಸ್, ರಾಜ್ಯ ಮುಖಂಡ, ಉದ್ಯಮಿ ಪ್ರಸಾದ್ ಶೆಟ್ಟಿ ಹುಬ್ಳಿ, ಹಿರಿಯ ಸಲಹೆಗಾರರು ಹಾಗೂ ಲೆಕ್ಕ ಪರಿಶೋಧಕ ಶ್ರೀನಿವಾಸ್ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

ಸಹಜ್ ಜೆ.ರೈ: ಯುವ ಉದ್ಯಮಿಯಾಗಿರುವ ಸಹಜ್ ಜೆ.ರೈಯವರು ಪ್ರಸ್ತುತ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.ವಿಜಯ ಸಾಮ್ರಾಟ್ ಸೇವಾ ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿರುವ ಇವರು ಸಂಸ್ಥೆಯ ಮೂಲಕ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಈ ಹಿಂದೆ ಜಯಕರ್ನಾಟಕ ಯುವ ಘಟಕದ ಜಿಲ್ಲಾಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದರು. ಸಾಮಾಜಿಕ, ಧಾರ್ಮಿಕ,ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿರುವ ಇವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ, ದ.ಕ.ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ ಬಳೆಜ್ಜರವರ ಪುತ್ರ.

LEAVE A REPLY

Please enter your comment!
Please enter your name here