ಅಗಳಿ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಧರ್ಮಸ್ಥಳ ಕ್ಷೇತ್ರದಲ್ಲಿ ಅನಾವರಣ

0

ಕಾಣಿಯೂರು: ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಆಮಂತ್ರಣವನ್ನು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ.5ರಂದು ಧರ್ಮಸ್ಥಳ ಕ್ಷೇತ್ರದಲ್ಲಿ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಅಗಳಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನ್ಯಾಯವಾದಿ ಮೋಹನ ಗೌಡ ಇಡ್ಯಡ್ಕ, ಅನುವಂಶೀಯ ಮೊಕ್ತೇಸರರಾದ ಶಿವರಾಮ ಗೌಡ ಅಗಳಿ, ಉದಯಕುಮಾರ್ ಅಗಳಿ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here