ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ 9ನೇ ಉಚಿತ ವೈದ್ಯಕೀಯ ಶಿಬಿರ

0

ಪುತ್ತೂರು:ಸಂಪ್ಯ ಶ್ರೀಮಹಾವಿಷ್ಣುಮೂರ್ತಿ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿಯ ವತಿಯಿಂದ ನಡೆಸಲ್ಪಡುವ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ 9ನೇ ತಿಂಗಳ ಶಿಬಿರವು ಡಿ.4ರಂದು ದೇವಸ್ಥಾನದ ಆವರಣದಲ್ಲಿ ನಡೆಯಲಿದೆ.

ಶಿಬಿರವನ್ನು ಉದ್ಘಾಟಿಸಿದ ಶಾಸಕ ಸಂಜೀವ ಮಠಂದೂರು ಮಾತನಾಡಿ, ಸಂಸ್ಕೃತಿಯ ಕೇಂದ್ರವಾಗಿರುವ ದೇವಸ್ಥಾನಗಳಲ್ಲಿ ಮಾನಸಿಕ ನೆಮ್ಮದಿಯ ಜೊತೆಗೆ ಶಾರೀರಕ ಆರೋಗ್ಯ ನೀಡುವ ಕಾರ್ಯ ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಿಂದ ಹೊಸ ಕಲ್ಪನೆ ಆರಂಭವಾಗಿರುವ ಶಿಬಿರ ನಿರಂತವಾಗಿ 9 ತಿಂಗಳುಗಳಿಂದ ನಡೆಯುತ್ತಿದೆ. ಕೊರೋನಾ ನಂತರ ನಮ್ಮ ಆರೋಗ್ಯ ಕಾಪಾಡಲು ಹೊಸ ಚಿಂತನೆಯೊಂದಿಗೆ ಸಂಪ್ಯದಿಂದ ಆರಂಭವಾಗಿದೆ. ದೇವಸ್ಥಾನದಲ್ಲಿ ವೈದ್ಯಕೀಯ ಶಿಬಿರ ನಡೆಸುವ ಮೂಲಕ ಭಗವಂತನ ಅನುಗ್ರಹದ ಜೊತೆಗೆ ವೈದ್ಯರ ಸಲಹೆ ಎರಡೂ ಒಂದೇ ಕಡೆ ದೊರೆತು ಆರೋಗ್ಯವಂತನಾಗಿ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಲು ಶಿಬಿರಗಳು ಸಹಕಾರಿಯಾಗಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಸುರೇಶ್ ಪುತ್ತೂರಾಯ ಮಾತನಾಡಿ, ಖಾಯಿಲೆಗಳು ವೈದ್ಯರ ಪರೀಕ್ಷೆ ಸುಲಭವಾಗಿ ದೊರೆತು ಉತ್ತಮ ಚಿಕಿತ್ಸೆ ದೊರೆಯಲಿ ಎಂಬ ಉದ್ದೇಶದಿಂದ ದೇವಸ್ಥಾನದಲ್ಲಿ ಶಿಬಿರವನ್ನು ಆಯೋಜಿಸಿಕೊಳ್ಳಲಾಗಿದೆ. ಸೇವೆಯ ರೂಪದಲ್ಲಿ ನಡೆಯುವ ಶಿಬಿರ ದೇವರ ಪ್ರಸಾದ ರೂಪವಾಗಿ ದೇವಸ್ಥಾನದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಔಷಧಿಗಳನ್ನು ನೀಡಲಾಗುತ್ತಿದೆ ಎಂದರು.

ವೈದ್ಯರಾದ ಡಾ.ಯಶವಂತ, ಡಾ.ಪ್ರೀತಿರಾಜ್ ಬಲ್ಲಾಳ್, ಡಾ. ಪ್ರಕಾಶ್ ಕುಲಕರ್ಣಿ ಮತ್ತು ಡಾ.ಅರುಣಾ ಕುಲಕರ್ಣಿ, ಸಂಪ್ಯ ನವಚೇತನ ಯುವಕ ಮಂಡಲದ ಅಧ್ಯಕ್ಷ ವಿಜಯ ಬಿ,ಎಸ್., ಮುಕ್ರಂಪಾಡಿ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಸೋಮಶೇಖರ್ ರೈ ಇಳಂತಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮೈಥಿಲಿ ಆರ್.ಎಸ್. ಪ್ರಾರ್ಥಿಸಿದರು. ಆರೋಗ್ಯ ರಕ್ಷಾ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಸ್ವಾಗತಿಸಿದರು. ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಲಕ್ಷ್ಮಣ್ ಬೈಲಾಡಿ, ವಿನ್ಯಾಸ್ ಯು.ಎಸ್., ಪ್ರೇಮಾ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಭೀಮಯ್ಯ ಭಟ್ ಅತಿಥಿಗಳಿಗೆ ಶಾಲು, ಸ್ಮರಣಿಕೆ ನೀಡಿ ಸ್ವಾಗತಿಸಿದರು.

ಈ ಬಾರಿಯ ಶಿಬಿರದಲ್ಲಿ ಹೃದ್ರೋಗ ತಪಾಸಣೆ, ಚರ್ಮರೋಗ ತಪಾಸಣೆ, ಕೀಲು ಮತ್ತು ಎಲುಬು ತಪಾಸಣೆ, ಇಎನ್‌ಟಿ, ಅಸ್ತಮಾ, ಶ್ವಾಸಕೋಶದ ಚಿಕಿತ್ಸೆ, ತಜ್ಞರಿಂದ ವೈದ್ಯಕೀಯ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ, ಮೂಲೆ ಸಾಂದ್ರತೆ ಹಾಗೂ ಉಚಿತ ಔಷಧಿಗಳು ವಿತರಣೆ ಮತ್ತು ಆರೋಗ್ಯ ಇಲಾಖೆ ವತಿಯಿಂದ ಬೂಸ್ಟರ್ ಡೋಸ್ ಲಸಿಕೆ ವಿತರಿಸಲಾಯಿತು. ಶ್ವಾಸಕೋಶ ತಜ್ಞ ಡಾ. ಪ್ರೀತಿರಾಜ್ ಬಲ್ಲಾಳ್, ತಜ್ಞ ವೈದ್ಯ ಡಾ.ಸುರೇಶ್ ಪುತ್ತೂರಾಯ, ಚರ್ಮರೋಗ ತಜ್ಞ ಡಾ. ಸಚಿನ್ ಶೆಟ್ಟಿ, ಕೀಲು ಮತ್ತು ಎಲುಬು  ತಜ್ಞ ಡಾ. ಸಚಿನ್ ಶಂಕರ್ ಹಾರಕೆರೆ, ಇಎನ್‌ಟಿ ತಜ್ಞೆ ಡಾ. ಅರ್ಚನಾ, ಸರ್ಜನ್ ಡಾ. ಯಶವಂತ, ಹಿರಿಯ ವೈದ್ಯ ದಂಪತಿಗಳಾದ ಡಾ. ಪ್ರಕಾಶ್ ಕುಲಕರ್ಣಿ ಮತ್ತು ಡಾ.ಅರುಣಾ ಕುಲಕರ್ಣಿ, ಆಯುರ್ವೇದ ತಜ್ಞರಾದ ಡಾ. ಸಾಯಿಪ್ರಕಾಶ್, ಡಾ. ದೀಕ್ಷಾ, ಡಾ. ವೇಣುಗೋಪಾಲ್ ತಪಾಸಣಾ ಶಿಬಿರದಲ್ಲಿ ಸಹಕರಿಸಿದರು.

ನವಚೇತನ ಯುವಕ ಮಂಡಲ ಸಂಪ್ಯ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮುಕ್ರಂಪಾಡಿ, ಐಡಿಯಲ್ ಲ್ಯಾಬೊರೇಟರಿ ಪುತ್ತೂರು, ಮಹಾವೀರ ಆಸ್ಪತ್ರೆ ಪುತ್ತೂರು, ಭಾರತೀಯ ಜನೌಷಧಿ ಕೇಂದ್ರಗಳು ಪುತ್ತೂರು, ಉಷಾ ಸ್ಕ್ಯಾನ್ ಸೆಂಟರ್ ದರ್ಬೆ, ಪುತ್ತೂರು ಡಯಾಗ್ನೋಸ್ಟಿಕ್ ಮತ್ತು ರಿಸರ್ಚ್ ಸೆಂಟರ್ ತೆಂಕಿಲ, ಹಾಗೂ ಹಲವು ಔಷಧಿ ಕಂಪೆನಿಗಳು ಶಿಬಿರದಲ್ಲಿ ಸಹಕರಿಸಿದರು.

LEAVE A REPLY

Please enter your comment!
Please enter your name here