ಪುತ್ತೂರಿನಲ್ಲಿ ತಾಲೂಕು ಮಟ್ಟದ ಜೆ ಇ ಲಸಿಕಾ ಅಭಿಯಾನಕ್ಕೆ ಚಾಲನೆ

0

44456 ಮಕ್ಕಳಿಗೆ ಲಸಿಕೆ ನೀಡುವ ಗುರಿ

ಪುತ್ತೂರು:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಪುತ್ತೂರು, ತಾಲೂಕು ಆಡಳಿತ ಪುತ್ತೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಂತ ಫಿಲೋಮಿನಾ ಪ್ರೌಢ ಶಾಲೆ ಪುತ್ತೂರು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ, ಮೆದುಳು ಜ್ವರ ನಿಯಂತ್ರಣ ನಿಟ್ಟಿನಲ್ಲಿ ತಾಲೂಕು ಮಟ್ಟದ ಜೆಇ ಲಸಿಕಾ ಅಭಿಯಾನ-2022 ಉದ್ಘಾಟನಾ ಕಾರ್ಯಕ್ರಮವು ಡಿ.೫ರಂದು ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರು ಅವರು ಕಾರ್ಯಕ್ರಮ ಉದ್ಘಾಟಿಸಿದರು.ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.ಸಹಾಯಕ ಆಯುಕ್ತ ಗಿರೀಶ್‌ನಂದನ್ ಎಂ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ, ಸಂತ ಫಿಲೋಮಿನಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈಯವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪದ್ಮಾವತಿ ಸ್ವಾಗತಿಸಿದರು.ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಶ್ಮಿತಾ ಪ್ರಭು ವಂದಿಸಿದರು.ಸಂತ ಫಿಲೋಮಿನಾ ಪ್ರೌಢ ಶಾಲೆ ಸಹ ಶಿಕ್ಷಕಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.

ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು:
ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಅವರು ವೈರಸ್ ಹರಡುವ ಲಕ್ಷಣ ಮತ್ತು ಅಭಿಯಾನದ ಆಯೋಜನೆ ಕುರಿತು ಮಾಹಿತಿ ನೀಡಿದರು.ಮೆದುಳಿಗೆ ಸೋಂಕು ತಗುಲಿದಾಗ ಕೆಲವರಿಗೆ ನರದೌರ್ಬಲ್ಯ, ಬುದ್ಧಿ ಮಾಂದ್ಯತೆ ಉಂಟಾಗುವ ಸಾಧ್ಯತೆ ಇರುತ್ತದೆ.ಮೆದುಳು ಜ್ವರದಿಂದ ಆಗುವ ತೊಂದರೆ ತಪ್ಪಿಸಲು 1ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ ನೀಡಿ ಗುರಿ ಸಾಧಿಸಬೇಕು ಎಂದರು.

ಪುತ್ತೂರು ತಾಲೂಕಿನಲ್ಲಿ 44456 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.ಮೆದುಳು ಜ್ವರದಿಂದ ಆಗುವ ತೊಂದರೆ ತಪ್ಪಿಸಲು 1 ರಿಂದ 15 ವರ್ಷದ ಮಕ್ಕಳಿಗೆ ಲಸಿಕೆ ನೀಡಿ ಗುರಿ ಸಾಧಿಸಬೇಕು.ಮೊದಲ ವಾರದಲ್ಲಿ ಎರಡು ತಾಲೂಕಿನ ಎಲ್ಲಾ ಶಾಲೆಗಳ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ2 ಮತ್ತು 3 ನೇ ವಾರಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ, ಅಂಗನವಾಡಿ, ಹೊರ ಜಿಲ್ಲೆಯಿಂದ ಬಂದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವ ಕಾರ್ಯ ನಡೆಯಲಿದೆ.
ಡಾ.ದೀಪಕ್ ರೈ, ಟಿಎಚ್‌ಒ ಪುತ್ತೂರು

LEAVE A REPLY

Please enter your comment!
Please enter your name here