ಪುತ್ತೂರು:ಒಳಮೊಗ್ರು ಗ್ರಾಪಂ ನ 2022-23ನೆ ಸಾಲಿನ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಹಾಗೂ ಮಹಿಳಾ ಉದ್ಯೋಗ ಸಬಲೀಕರಣ ದೂಡಿ ಮಹಿಳಾ ಗ್ರಾಮ ಸಭೆ ದ.6ರಂದು ಬೆಳಿಗ್ಗೆ ಕುಂಬ್ರ ರೈತ ಸಭಾಭವನದಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ರವರು ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ ಪ್ರತಿನಿಧಿಗಳು,ಮಹಿಳೆಯರು, ಶಿಕ್ಷಣ ಪ್ರೇಮಿಗಳು, ಸಮಾಜ ಸೇವಕರು, ಸರ್ಕಾರೇತರ ಸಂಸ್ಥೆಯವರು, ಸಂಘ-ಸಂಸ್ಥೆಯವರು, 6 ರಿಂದ 18 ವರ್ಷದವರೆಗಿನ ಮಕ್ಕಳು ಹಾಗೂ ಪೋಷಕರು ಆಗಮಿಸಿ, ಗ್ರಾಮಸಭೆಯನ್ನು ಯಶಸ್ವಿಗೊಳಿಸುವುದಲ್ಲದೆ, ಮಕ್ಕಳ ಮತ್ತು ಮಹಿಳೆಯರ ಸರ್ವಾಂಗೀಣ ಅಭ್ಯುದಯದ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ, ಸಹಕರಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿ, ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.