ಕಡಬ: ಬಿಳಿನೆಲೆ ಗ್ರಾಮ ಪಂಚಾಯತ್‌ನಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯ 2023-24ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ‘ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯೆಡೆಗೆ’ ಮತ್ತು ‘ಜಲ ಸಂಜೀವಿನಿ ಕಾರ್ಯಕ್ರಮ’ ಮಹಾತ್ಮಗಾಂಧಿ ನರೇಗಾ ಯೋಜನೆ ಮತ್ತು ಜಲಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ವೈಜ್ಞಾನಿಕವಾಗಿ ಯೋಜನೆಯನ್ನು ತಯಾರಿಸುವ ಉದ್ದೇಶದಿಂದ
ವಿಶೇಷ ಗ್ರಾಮ ಸಭೆ ಮತ್ತು ಮಹಿಳಾ ಉದ್ಯೋಗ ಸಬಲೀಕರಣ ಅಭಿಯಾನದಡಿ ಮಹಿಳಾ ಗ್ರಾಮ ಸಭೆ ಡಿ.೨ರಂದು ಬಿಳಿನೆಲೆ ವಿಕಾಸ ಸಭಾ ಭವನದಲ್ಲಿ ನಡೆಯಿತು.
ಉದ್ಯೋಗ ಖಾತರಿ ಯೋಜನೆಯ ತಾಲೂಕು ತಾಂತ್ರಿಕ ಸಹಾಯಕರಾದ ಪ್ರಜ್ವಲ್‌ರವರು ನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಮತ್ತು ಮಹಿಳಾ ಸಬಲೀಕರಣ ಬಗ್ಗೆ ಮಾಹಿತಿ ನೀಡಿದರು. ಅಲ್ಲದೇ ಈ ಯೋಜನೆಯ ಮೂಲಕ ಯಾವೆಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು ಎನ್ನುವುದರ ಬಗ್ಗೆ ವಿವರಿಸಿದರು.
ಬಿಳಿನೆಲೆ ಗ್ರಾ.ಪಂ ಪಿಡಿಒ ಸುಜಾತ ಮಾತನಾಡಿ ಉದ್ಯೋಗ ಖಾತರಿ ಯೋಜನೆ ಅತ್ಯುತ್ತಮ ಯೋಜನೆಯಾಗಿದ್ದು ಇದನ್ನು ಗ್ರಾಮಸ್ಥರು ಸದ್ಭಳಕೆ ಮಾಡಿಕೊಳ್ಳಬೇಕು, ಮಹಿಳೆಯರು ಇದರ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳುವ ಮೂಲಕ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಮಾರ್ಗದರ್ಶಿ ಅಧಿಕಾರಿಯಾಗಿದ್ದ ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ಕೃಷ್ಣ ಬಿ ಅವರು ತಮ್ಮ ಇಲಾಖೆಗೆ ಸಂಬಂಧಿಸಿದ ಮಾಹಿತಿ ನೀಡಿದರು. ಬಿಳಿನೆಲೆ ಗ್ರಾ.ಪಂ ಅಧ್ಯಕ್ಷ ಶಿವಶಂಕರ ಕೆ, ಗ್ರಾ.ಪಂ ಸದಸ್ಯರಾದ ಸತೀಶ್ ಕಳಿಗೆ, ಭವ್ಯ, ಚಂದ್ರಾವತಿ,ಸಂಪನ್ಮೂಲ ವ್ಯಕ್ತಿಯಾಗಿ ಅಂಗನವಾಡಿ ಮೇಲ್ವಿಚಾರಕಿ ವನಿತಾ ಟಿ.ಎಂ, ಕಿರಿಯ ಆರೋಗ್ಯ ಸಹಾಯಕಿ ಮಾಲತಿ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಿಎಚ್‌ಓ, ಸಂಜೀವಿನಿ ಸಂಘದ ಎಂಬಿಕೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಿಡಿಒ ಸುಜಾತ ಕೆ ಸ್ವಾಗತಿಸಿ ವಂದಿಸಿದರು. ಗ್ರಾ.ಪಂ ಸಿಬ್ಬಂದಿಗಳಾದ ಇಂದಿರಾ, ಪ್ರಿಯಾ, ಸೃಜನ್, ಭವಿತ್ ಸಹಕರಿಸಿದರು.