ಈಶ್ವರಮಂಗಲ: ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಬೆಳ್ಳಿಚಡವು ಇದರ ಶ್ರೀ ಅಯ್ಯಪ್ಪ ಸ್ವಾಮಿ ಹಾಗೂ ಶಾರದಾಂಬ ಭಜನಾ ಮಂದಿರ ಮತ್ತು ನಾಗ ಸಾನಿಧ್ಯದ ಪ್ರತಿಷ್ಠಾ ಮಹೋತ್ಸವವು ಕುಂಟಾರು ಶ್ರೀ ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಕುಂಟಾರು ಶ್ರೀ ರವೀಶ ತಂತ್ರಿಗಳ ನೇತೃತ್ವದಲ್ಲಿ ದ. 7 ಮತ್ತು 8ರಂದು ನಡೆಯಲಿದೆ.
ದ. 7ರಂದು ಸಂಜೆ ಈಶ್ವರಮಂಗಲ ಪೇಟೆಯಿಂದ ಹೊರೆಕಾಣಿಕೆ, ದೇವರ ಛಾಯಾ ಬಿಂಬವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಿಂದ ಪಲ್ಲಕ್ಕಿ ಮೆರವಣಿಗೆಯಲ್ಲಿ ಭಜನೆ, ಚೆಂಡೆ, ವಾದ್ಯಘೋಷಗಳೊಂದಿಗೆ ಭಜನಾ ಮಂದಿರಕ್ಕೆ ಆಗಮನ, ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ, ರಾತ್ರಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಪುಣ್ಯಾಹವಾಚನ, ಸುದರ್ಶನ ಹೋಮ, ಪ್ರೇತಾವಾಹನೆ, ಭಾಧಾಮೂರ್ತಿಗಳ ಆವಾಹನೆ, ಉಚ್ಛಾಟನೆ ಬಲಿ, ಸ್ಥಳಶುದ್ಧಿ, ಪ್ರಸಾದಶುದ್ಧಿ, ರಾಕ್ಷೋಘ್ನಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತುಪುಣ್ಯಾಹಾಂತ, ಅನ್ನಸಂತರ್ಪಣೆ ನಡೆಯಲಿದೆ.
ಡಿ. 8ರಂದು ಬೆಳಿಗ್ಗೆ ಗಣಪತಿ ಹೋಮ, ಬ್ರಹ್ಮಕಲಶ ಪೂಜೆ, ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಛಾಯಾ ಬಿಂಬ ಪ್ರತಿಷ್ಠೆ, ಪ್ರಸಾದ ವಿತರಣೆ, ಭಜನಾ ಕಾರ್ಯಕ್ರಮ ಧಾರ್ಮಿಕ ಸಭೆ ನಡೆಯಲಿದೆ. ಶ್ರೀ ಕ್ಷೇತ್ರ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರಿಂದ ಆಶೀರ್ವಚನ, ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳಿಂದ ದೀಪ ಪ್ರಜ್ವಲನೆ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಕೇರಳ ಹಿಂದೂ ಐಕ್ಯ ವೇದಿಕೆಯ ಕಾರ್ಯಧ್ಯಕ್ಷರಾದ ವಲ್ಸನ್ ತಿಲ್ಲಂಕೇರಿಯವರು ಧಾರ್ಮಿಕ ಉಪನ್ಯಾಸ ನೀಡಲಿದ್ದು, ಮೇನಾಲ ಕಿಶನ್ ಜೆ. ಶೆಟ್ಟಿ, ಪುತ್ತೂರು ಮಹಾತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ, ದ.ಕ. ಜಿಲ್ಲಾ ಹಾಲು ಒಕ್ಕೂಟದ ಉಪಾಧ್ಯಕ್ಷರಾದ ಎಸ್.ಬಿ. ಜಯರಾಮ ರೈ ಬಳಜ್ಜ, ಮಂಗಳೂರು ಎಮ್.ಆರ್.ಪಿ.ಎಲ್.ನ ಸೀತಾರಾಮ ರೈ ಕೈಕಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, ಭಜನೆ, ರಾತ್ರಿ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಶ್ರೀ ಜ್ಙಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ನಡೆಯಲಿದೆ ಎಂದು ಸೇವಾ ಸಮಿತಿಯ ಪ್ರಕಟಣೆ ತಿಳಿಸಿದೆ.