ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಇದರ ಪ್ರಾಯೋಜಕತ್ವದಲ್ಲಿ ಪ್ರಾರಂಭಗೊಂಡ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು ಇದರ 8ನೇ ಶಾಖೆ ಕಾಣಿಯೂರಿನ ರಾಶಿ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಹೇಳಿದ್ದಾರೆ.
ಡಿ.7ರಂದು ಸುದ್ದಿ ಸ್ಟುಡಿಯೋದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, 2002ರಲ್ಲಿ ಶ್ರೀ ಮಹಾಲಿಂಗೇಶ್ವರ ಸಭಾಭವನದ ಕಟ್ಟಡದಲ್ಲಿ ಪ್ರಾರಂಭಗೊಂಡ ಸಹಕಾರ ಸಂಘವು ಪುತ್ತೂರು, ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು ಮತ್ತು ಪುತ್ತೂರು ನಗರ ಹೀಗೆ 7 ಶಾಖೆಗಳನ್ನು ಮಾಡಿಕೊಂಡು ವ್ಯವಹರಿಸುತ್ತಿದೆ. 6,800ಕ್ಕಿಂತಲೂ ಅಧಿಕ ಸದಸ್ಯರನ್ನು ಹೊಂದಿದ್ದು, ಕಳೆದ ಅವಧಿಯಲ್ಲಿ 291 ಕೋಟಿಗಿಂತಲು ಮಿಕ್ಕಿ ವ್ಯವಹಾರ ಮಾಡಿದ್ದು, 3 ಕೋಟಿಗಿಂತ ಮಿಕ್ಕಿ ಪಾಲು ಬಂಡವಾಳವನ್ನು ಹೊಂದಿದೆ. ಕಳೆದ ಅವಧಿಯಲ್ಲಿ ರೂ. 84 ಲಕ್ಷ ಲಾಭ ಪಡೆದಿರುತ್ತದೆ. ಕಳೆದ ಅವಧಿಯಲ್ಲಿ 60 ಕೋಟಿಗಿಂತ ಮಿಕ್ಕಿ ಠೇವಣಿ ಹೊಂದಿದ್ದು, 52 ಕೋಟಿಗಿಂತ ಮಿಕ್ಕಿ ಹೊರಬಾಕಿ ಸಾಲ ಇರುತ್ತದೆ. 2009ರಲ್ಲಿ ಕಡಬದ ವೈಭವ ಸಂಕೀರ್ಣದಲ್ಲಿ, 2011ರಲ್ಲಿ ಉಪ್ಪಿನಂಗಡಿಯ ತಾಹಿರ ಕಾಂಪ್ಲೆಕ್ಸ್‌ನಲ್ಲಿ, 2014ರಲ್ಲಿ ನೆಲ್ಯಾಡಿಯ ಡೆಂಜ ಕಾಂಪ್ಲೆಕ್ಸ್‌ನಲ್ಲಿ, 2015ರಲ್ಲಿ ಕುಂಬ್ರದ ಕಿರಣ್ ಸಂಕೀರ್ಣದಲ್ಲಿ, 2020ರಲ್ಲಿ ಆಲಕಾರಿನ ಗಣೇಶ್ ಕಾಂಪ್ಲೆಕ್ಸ್‌ನಲ್ಲಿ, 2021ರಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಸಭಾ ಭವನದ ಕಟ್ಟಡದಲ್ಲಿ ಪೂರ್ಣ ಪ್ರಮಾಣದ ಶಾಖೆಗಳನ್ನು ಪ್ರಾರಂಭಿಸಿ ಕಾರ್ಯನಿರ್ವಹಿಸುತ್ತಿದೆ ಎಂದರು.
2002ರಲ್ಲಿ ಇಡ್ಯಡ್ಕ ಮೋಹನ ಗೌಡರ ನೇತೃತ್ವದಲ್ಲಿ ಸುಮಾರು 20 ಸಮಾನ ಮನಸ್ಕರ ತಂಡ ಪ್ರವರ್ತಕರಾಗಿ ಈ ಸಂಸ್ಥೆಯನ್ನು ಪ್ರಾರಂಭಿಸಿದರು ಸ್ಥಾಪಕ ಅಧ್ಯಕ್ಷರಾಗಿ ದಿ| ಜಗನ್ನಾಥ ಬೊಮ್ಮೆಟ್ಟಿ, ಉಪಾಧ್ಯಕ್ಷರಾಗಿ ಜೆ.ಕೆ. ವಸಂತ ಗೌಡ ಸೇವೆ ಸಲ್ಲಿಸಿದ್ದು, ನಂತರದ ದಿನಗಳಲ್ಲಿ ರಾಮಕೃಷ್ಣ ಕರ್ಮಲರವರು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಪ್ರಸ್ತುತ ಚಿದಾನಂದ ಬೈಲಾಡಿ ಅಧ್ಯಕ್ಷರಾಗಿ, ಯು.ಪಿ.ರಾಮಕೃಷ್ಣ ಉಪಾಧ್ಯಕ್ಷರಾಗಿ, ನಿರ್ದೇಶಕರುಗಳಾಗಿ ಮೋಹನ ಗೌಡ ಇಡ್ಯಡ್ಕ, ರಾಮಕೃಷ್ಣ ಗೌಡ ಕರ್ಮಲ, ಜಿನ್ನಪ್ಪ ಗೌಡ ಮಳುವೇಲು, ಸತೀಶ್ ಪಾಂಬಾರು, ಪ್ರವೀಣ್ ಕುಂಟ್ಯಾನ, ಲೋಕೇಶ್ ಚಾಕೋಟೆ, ಸಂಜೀವ ಕುದ್ಲೂರು, ಸುದರ್ಶನ ಗೌಡ ಕೋಡಿಂಬಾಳ, ತೇಜಸ್ವಿನಿ ಶೇಖರ ಗೌಡ ಕಟ್ಟಪುಣಿ, ಸುಪ್ರೀತಾ ರವಿಚಂದ್ರ, ಆಂತರಿಕ ಲೆಕ್ಕ ಪರಿಶೋಧಕರಾದ ಶ್ರೀಧರ ಗೌಡ ಕಣಜಾಲು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸುಧಾಕರ ಕೆ. ಸೇವೆ ಸಲ್ಲಿಸುತ್ತಿದ್ದಾರೆ. ಸಂಘದಲ್ಲಿ ಆಸ್ತಿ ಖರೀದಿ, ಆಸ್ತಿ ಅಡವು, ಮನೆ ನಿರ್ಮಾಣ, ವಾಹನ ಸಾಲ, ವ್ಯಾಪಾರ ಸಾಲ, ಚಿನ್ನಾಭರಣ ಅಡವು, ವೇತನ ಆಧಾರಿತ ಸಾಲ ಹೀಗೆ ವಿವಿಧ ರೀತಿಯ ಸಾಲಗಳನ್ನು ಆಕ?ಕ ಬಡ್ಡಿಯಲ್ಲಿ ನೀಡಲಾಗುತ್ತಿದೆ. 2015ರಿಂದ ಆಡಿಟ್ ವರದಿಯಲ್ಲಿ ನಿರಂತರವಾಗಿ ‘ಎ’ ತರಗತಿಯನ್ನೇ ಪಡೆಯುತ್ತಾ ಬಂದಿದೆ ಎಂದು ಚಿದಾನಂದ ಬೈಲಾಡಿ ಹೇಳಿದರು.
ಡಿ.12ರಂದು ಬೆಳಗ್ಗೆ 10 ಗಂಟೆಗೆ ಕಾಣಿಯೂರು ಜಾತ್ರಾ ಗದ್ದೆಯಲ್ಲಿ ಸಂಘದ ಕಾಣಿಯೂರು ಶಾಖೆಯ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮ ನಡೆಯಲಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖೆಯ ಪರಮಪೂಜ್ಯ ಶ್ರೀ ಡಾ|| ಧರ್ಮಪಾಲನಾಥ ಸ್ವಾಮೀಜಿಯವರು ದೀಪಪ್ರಜ್ವಲನೆಗೈಯಲಿದ್ದಾರೆ. ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಮತ್ತು ಬಂದರು ಖಾತೆಯ ಸಚಿವರಾದ ಎಸ್. ಅಂಗಾರ, ಶಾಸಕರಾದ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆ, ಸಹಕಾರಿ ಸಂಘಗಳ ಉಪನಿಬಂಧಕರಾದ ಎಚ್.ಎನ್. ರಮೇಶ್, ಕಾಣಿಯೂರು ರಾಶಿ ಕಾಂಪ್ಲೆಕ್ಸ್ ಮಾಲಕ ಚಂದ್ರಶೇಖರ ಗೌಡ ಭಾಗವಹಿಸಲಿದ್ದಾರೆ. ಕಾಣಿಯರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ದರ್ಖಾಸು, ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೀವಿ ವಿ. ಶೆಟ್ಟಿ, ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀ ಲೋಹಿತಾಕ್ಷ ಕೆ., ಕಾಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ ಉದನಡ್ಕ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ರಾಮಕೃಷ್ಣ ಕರ್ಮಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ., ಆಂತರಿಕ ಲೆಕ್ಕಪರಿಶೋಧಕರಾದ ಶ್ರೀಧರ ಕಣಜಾಲು ಉಪಸ್ಥಿತರಿದ್ದರು.