ಕಾವು ನವೋದಯ ಒಕ್ಕೂಟದಿಂದ ಉಚಿತ ನೇತ್ರಾ ಚಿಕಿತ್ಸಾ ಶಿಬಿರ

0

ಕಾವು: ನವೋದಯ ಗ್ರಾಮವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಮತ್ತು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಇವರ ಸಹಕಾರದೊಂದಿಗೆ ಆನಂದಾಶ್ರಮ ಸೇವಾ ಟ್ರಸ್ಟ್ ರಿ. ಪುತ್ತೂರು ಇವರ ಸಹಭಾಗಿತ್ವದಲ್ಲಿ ನವೋದಯ ಸ್ವಸಹಾಯ ಸಂಘಗಳ ಒಕ್ಕೂಟ ಕಾವು ಇದರ ವತಿಯಿಂದ ಉಚಿತ ನೇತ್ರಾ ಚಿಕಿತ್ಸಾ ಸೇವಾ ಶಿಬಿರವು ದ.6ರಂದು ಕಾವು ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ ನಡೆಯಿತು.


ಮಂಗಳೂರು ವೆನ್ಲಾಕ್ ಆಸ್ಪತ್ರೆಯ ನೇತ್ರಾಧಿಕಾರಿ ಡಾ. ಅನಿಲ್ ರಾಮಾನುಜರವರು ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯರವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಆನಂದಾಶ್ರಮ ಸೇವಾ ಟ್ರಸ್ಟ್‌ನ ಡಾ. ಗೌರಿ ಪೈ, ವೆನ್ಲಾಕ್ ಆಸ್ಪತ್ರೆಯ ಡಾ. ಅಶ್ವಿನ್, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಓ ಕೇಶವಮೂರ್ತಿ ಪಿ.ಜಿ ಉಪಸ್ಥಿತರಿದ್ದರು. ಸವಿತಾ ರೈ ಪ್ರಾರ್ಥಿಸಿದರು. ನವೋದಯ ಟ್ರಸ್ಟ್‌ನ ತಾಲೂಕು ಮೇಲ್ವಿಚಾರಕ ಚಂದ್ರಶೇಖರ್‌ರವರು ಸ್ವಾಗತಿಸಿ, ಕಾವು ನವೋದಯ ಒಕ್ಕೂಟದ ಅಧ್ಯಕ್ಷ ಸುಬ್ರಾಯ ಗೌಡರವರು ವಂದಿಸಿದರು. ಒಕ್ಕೂಟದ ಮಾಜಿ ಅಧ್ಯಕ್ಷ ಚಿದಾನಂದ ಆಚಾರ್ಯರವರು ಕಾರ್ಯಕ್ರಮ ನಿರ್ವಹಿಸಿದರು. ಪ್ರೇರಕಿ ಮಾಧವಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರುಗಳು ಸಹಕರಿಸಿದರು.


140 ಜನರಿಗೆ ಉಚಿತ ಕನ್ನಡಕ ವಿತರಣೆ:
ನೇತ್ರಾ ಚಿಕಿತ್ಸಾ ಸೇವಾ ಶಿಬಿರದಲ್ಲಿ ಸುಮಾರು 200ಕ್ಕೂ ಅಧಿಕ ಜನ ಪಾಲ್ಗೊಂಡು ಉಚಿತವಾಗಿ ಕಣ್ಣಿನ ತಪಾಸಣೆ, ಚಿಕಿತ್ಸೆ ಪಡೆದುಕೊಂಡರು. ಶಿಬಿರದಲ್ಲಿ ಭಾಗವಹಿಸಿದ 140 ಜನರಿಗೆ ವೈದ್ಯರ ಸಲಹೆಯಂತೆ ಆನಂದಾಶ್ರಮ ಸೇವಾ ಟ್ರಸ್ಟ್‌ನಿಂದ ಉಚಿತ ಕನ್ನಡಕ ವಿತರಣೆ ಮಾಡಲಾಯಿತು. 12ಜನರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಉಚಿತ ಕಣ್ಣಿನ ಪೊರೆ ಆಪರೇಷನ್‌ಗೆ ದಾಖಲಾಗುವಂತೆ ಸಲಹೆ ನೀಡಲಾಯಿತು.

LEAVE A REPLY

Please enter your comment!
Please enter your name here