ಹಿಂದು, ಮುಸ್ಲಿಂ ಯುವಕನ ಬರ್ತ್ ಡೇ ಪಾರ್ಟಿಯಲ್ಲಿ ಹಿಂದು ಯುವತಿಯರು !

0

ಟ್ರೋಲ್ ಪೇಜ್ ನಲ್ಲಿ ವಿಡಿಯೋ ವೈರಲ್ – ವಿದ್ಯಾರ್ಥಿನಿಯರಿಂದ ದೂರು

ಪುತ್ತೂರು:ಪುತ್ತೂರು ಬಸ್ ನಿಲ್ದಾಣ ಬಳಿಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ಹಿಂದು ಮತ್ತು ಮುಸ್ಲಿಂ ವಿದ್ಯಾರ್ಥಿಗಳಿಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಹಿಂದು ವಿದ್ಯಾರ್ಥಿನಿಯರು ಇರುವ ವಿಡಿಯೋ ಟ್ರೊಲ್ ಪೇಜ್‌ನಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಸೆನ್ ಪೊಲೀಸ್ ವಿಭಾಗಕ್ಕೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.


ವಾರದ ಹಿಂದೆ ಕಬಕ ಪುತ್ತೂರು ರೈಲ್ವೇ ನಿಲ್ದಾಣ ರಸ್ತೆಯಲ್ಲಿ ಪುತ್ತೂರು ಬಸ್ ನಿಲ್ದಾಣದ ಬಳಿಯ ಖಾಸಗಿ ಶುಶ್ರುಶಾ, ವಿಜ್ಞಾನ ಶಿಕ್ಷಣ ಸಂಸ್ಥೆಯ ಹಿಂದು ಮತ್ತು ಮುಸ್ಲಿಂ ವಿದ್ಯಾರ್ಥಿಗಳಿಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಹಿಂದು ಹುಡುಗಿಯರು ಬರ್ತ್‌ಡೇ ಆಚರಿಸಿಕೊಂಡ ವಿದ್ಯಾರ್ಥಿಗಳಿಬ್ಬರಿಗೆ ಕೇಕ್ ತಿನ್ನಿಸುವ ವಿಡಿಯೋ ವೈರಲ್ ಆಗಿದ್ದರಿಂದ ಹಿಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿ ಈ ಕುರಿತು ಶಿಕ್ಷಣ ಸಂಸ್ಥೆಗೆ ಮಾಹಿತಿ ನೀಡಿದ್ದರು.ಬಳಿಕ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಯಿಂದ ಎಚ್ಚರಿಕೆ ನೀಡಲಾಗಿತ್ತು.ಆದರೆ ಇದೀಗ ಬರ್ತ್‌ಡೇ ಪಾರ್ಟಿಯ ವಿಡಿಯೋ ಟ್ರೋಲ್ ಪೇಜ್‌ನಲ್ಲಿ ವೈರಲ್ ಆಗಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿನಿಯರು ಸೆನ್ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿದು ಬಂದಿದೆ.

ಶೈಕ್ಷಣಿಕ ಅವಧಿಯಲ್ಲಿ ಶಿಸ್ತಿಗೆ ಆದ್ಯತೆ:

ಶೈಕ್ಷಣಿಕ ಅವಧಿಯಲ್ಲಿ ಈ ಘಟನೆ ನಡೆದಿರುವುದಲ್ಲ.ಶೈಕ್ಷಣಿಕ ಅವಧಿಯಲ್ಲಿ ನಾವು ಶಿಸ್ತಿಗೆ ಆದ್ಯತೆ ನೀಡುತ್ತಿದ್ದೆವೆ.ಶೈಕ್ಷಣಿಕ ಅವಧಿಯ ಬಳಿಕ ಮಕ್ಕಳು ನಮ್ಮ ನಿಯಂತ್ರಣದಲ್ಲಿರುವುದಿಲ್ಲ.ಆದರೂ ಮುಂದಿನ ದಿನಗಳಲ್ಲಿ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಸ್ಪಷ್ಟನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here