ಡಿ.10: ಹಿರೇಬಂಡಾಡಿ ಶಾಲಾ ಅಕ್ಷರದಾಸೋಹ ಭೋಜನ ಶಾಲೆ, ತರಗತಿ ಕೊಠಡಿ ಉದ್ಘಾಟನೆ, ನೂತನ ಕೊಠಡಿಗೆ ಶಿಲಾನ್ಯಾಸ, ಶಾಲಾ ವಾರ್ಷಿಕೋತ್ಸವ

0

ಹಿರೇಬಂಡಾಡಿ: ಹಿರೇಬಂಡಾಡಿ ಸರಕಾರಿ ಉ.ಹಿ.ಪ್ರಾ.ಶಾಲಾ ಅಕ್ಷರದಾಸೋಹ ಭೋಜನ ಶಾಲೆ ಮತ್ತು ತರಗತಿ ಕೊಠಡಿಗಳ ಉದ್ಘಾಟನೆ ಹಾಗೂ ನೂತನ ಕೊಠಡಿಗಳ ಶಿಲಾನ್ಯಾಸ ಮತ್ತು 2022-23ನೇ ಶೈಕ್ಷಣಿಕ ಸಾಲಿನ ಶಾಲಾ ವಾರ್ಷಿಕೋತ್ಸವ ಡಿ.10 ರಂದು ನಡೆಯಲಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಸೋಮೇಶ್ ಕೆ., ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ನವೀನ್ ಪಡ್ಪು ಹಾಗೂ ಮುಖ್ಯಗುರು ಬಾಬು ಟಿ.,ತಿಳಿಸಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಎಸ್‌ಡಿಎಂಸಿ ಅಧ್ಯಕ್ಷ ಸೋಮೇಶ್ ಕೆ.,ಧ್ವಜಾರೋಹಣ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಹಿರೇಬಂಡಾಡಿ ಗ್ರಾ.ಪಂ.ಉಪಾಧ್ಯಕ್ಷೆ ಭವಾನಿ, ಪಿಡಿಒ ದಿನೇಶ್ ಶೆಟ್ಟಿ, ಉಪ್ಪಿನಂಗಡಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಹಮ್ಮದ್ ಅಶ್ರಫ್, ಹಿರೇಬಂಡಾಡಿ ಬದ್ರಿಯಾ ಜುಮಾ ಮಸೀದಿಯ ಅಬ್ದುಲ್ ಲತೀಫ್ ಮುಸ್ಲಿಯಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ಕುಮಾರ್ ಅವರು ಶಾಲಾ ಕೊಠಡಿ ಉದ್ಘಾಟಿಸಲಿದ್ದಾರೆ

. ಶಾಸಕ ಸಂಜೀವ ಮಠಂದೂರು ಅಕ್ಷರ ದಾಸೋಹ ಭೋಜನ ಶಾಲೆ ಉದ್ಘಾಟಿಸಲಿದ್ದಾರೆ. ಹಿರೇಬಂಡಾಡಿ ಗ್ರಾ.ಪಂ.ಅಧ್ಯಕ್ಷೆ ಚಂದ್ರಾವತಿಸೀತಾರಾಮ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ನವೀನ್‌ಕುಮಾರ್ ಭಂಡಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಭರತ್ ಬಿ.ಎಂ., ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕಿ ಶೈಲಜಾ ಭಟ್, ಸಹಾಯಕ ಇಂಜಿನಿಯರ್ ಸಂದೀಪ್, ಉಪ್ಪಿನಂಗಡಿ ಗಿರಿಜಾ ಕ್ಲಿನಿಕ್‌ನ ವೈದ್ಯ ಡಾ.ರಾಜಾರಾಮ್ ಕೆ.ಬಿ., ಹಿರೇಬಂಡಾಡಿ ಉಳತ್ತೋಡಿ ಶ್ರೀ ಷಣ್ಮುಖ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಸಾಂತಿತ್ತಡ್ಡ, ಹಿರೇಬಂಡಾಡಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಬಿ.ಕೆ.ಅಬೂಬಕ್ಕರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರೇಬಂಡಾಡಿ ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಹಮ್ಮಬ್ಬ ಶೌಕತ್ ಆಲಿ ಅವರಿಗೆ ಸನ್ಮಾನ ನಡೆಯಲಿದೆ.

ಸಂಜೆ ೫ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ನಿವೃತ್ತ ಶಿಕ್ಷಕಿ ಭಾಗೀರಥಿ ಉದ್ಘಾಟಿಸಲಿದ್ದಾರೆ. ಕೊಯಿಲ ಕೆ.ಸಿ.ಫಾರ್ಮ್ ಸರಕಾರಿ ಹಿ.ಪ್ರಾ.ಶಾಲೆಯ ನಿವೃತ್ತ ಶಿಕ್ಷಕಿ ದೇವಮ್ಮ, ಎಸ್‌ಡಿಎಂಸಿ ನಾಮನಿರ್ದೇಶಿತ ಸದಸ್ಯ ಲಕ್ಷ್ಮೀಶ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ:
ಸಂಜೆ ಸ್ಥಳೀಯ ಅಂಗನವಾಡಿಗಳಾದ ನೆಹರುತೋಟ, ಬೊಳ್ಮುಡ, ಸೀಂಕ್ರುಕೊಡಂಗೆ, ಪಾಲೆತ್ತಡಿ, ಬೋಳಮೆ, ದಾಸರಮೂಲೆ ಪುಟಾಣಿಗಳಿಂದ ವಿವಿಧ ವಿನೋದಾವಳಿ ನಡೆಯಲಿದೆ. ರಾತ್ರಿ ಎಲ್‌ಕೆಜಿ, ಯುಕೆಜಿ ಪುಟಾಣಿಗಳಿಂದ, 1 ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಲರವ ‘ಚುಕ್ಕಿ ಚಿನ್ನಾ’ ಶಾಲಾ ವಿದ್ಯಾರ್ಥಿಗಳಿಂದ ನಾಟಕ-‘ಅಣ್ಣೆ ಬರ್‌ಪೆಗೆ’, ಬಳಿಕ ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 2 ಗಂಟೆಯಿಂದ ಪುಂಜಾಲಕಟ್ಟೆ-ಕುಡ್ಲ ತಾಂಬೂಲ ಕಲಾವಿದೆರ್ ಅಭಿನಯದ ಕುತೂಹಲಭರಿತ ಹಾಸ್ಯಮಯ ತುಳು ನಾಟಕ ‘ಪರಿಮಳ ಕಾಲನಿ’ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here