ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡ ಆರೋಪಿಗೆ ಜಾಮೀನು

0

ಪುತ್ತೂರು:ಬಾಲಕಿಯೋರ್ವರಿಗೆ ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿದೆ.

ಬಸ್ಸೊಂದರಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಈಶ್ವರಮಂಗಲದ ಅಬ್ದುಲ್ ಸತ್ತಾರ್ ಎಂಬಾತನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದರು. ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯವು ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ. ಆರೋಪಿಯ ಪರವಾಗಿ ನ್ಯಾಯವಾದಿಗಳಾದ ಎಂ.ಪಿ. ಅಬೂಬಕ್ಕರ್ ಮತ್ತು ರಮ್ಲತ್ ವಾದಿಸಿದ್ದರು.

LEAVE A REPLY

Please enter your comment!
Please enter your name here