ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಂಭ್ರಮಕ್ಕೆ ಚಾಲನೆ

0

ಪುತ್ತೂರು: ಇಲ್ಲಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಂಭ್ರಮಕ್ಕೆ ಡಿ. 8 ರಂದು ಚಾಲನೆ ದೊರೆಯಿತು.

ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳ‌ ಮೊದಲು ಹಿರಿಯರಾದ ಬಿರ್ಮಣ್ಣ ಗೌಡ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಶಾಲಾ ಸಂಚಾಲಕ ರವಿನಾರಾಯಣ, ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್, ಮುಖ್ಯಗುರು ಸತೀಶ್ ಕುಮಾರ್ ರೈ ಉಪಸ್ಥಿತರಿದ್ದರು.

ಡಿ. 8 ರಂದು ಸಂಜೆ ಸಭಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದುವರಿಯಲಿವೆ.
ಡಿ. 9 ರಂದು ಅಪರಾಹ್ನ ದೀಪಪ್ರಜ್ವಲನೆಯೊಂದಿಗೆ ಎರಡನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ.‌
ಡಿ. 10 ರಂದು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ‘ಅವಿಯುಕ್ತ’ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here