ಪುತ್ತೂರು: ರಾಜ್ಯ ಸರಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ನೂತನ ಕೋಶಾಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಮ್ಯಾನೇಜರ್ ಆಗಿರುವ ಕೃಷ್ಣ ಬಿ.ರವರು ಆಯ್ಕೆಯಾಗಿರುತ್ತಾರೆ.
ಸಂಘದ ಕೋಶಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಂದಾಯ ಇಲಾಖೆಯ ನಾಗೇಶ್ ಕೆ.ರವರು ಇತ್ತೀಚೆಗೆ ಸೇವಾ ನಿವೃತ್ತಿ ಹೊಂದಿದ್ದು ಅವರಿಂದ ತೆರವಾದ ಸ್ಥಾನಕ್ಕೆ ನೂತನ ಕೋಶಾಧಿಕಾರಿಯಾಗಿ ಕೃಷ್ಣ ಬಿ.ರವರು ಆಯ್ಕೆಯಾಗಿರುತ್ತಾರೆ. ಕೃಷ್ಣ ಬಿ.ರವರು ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಕಾರ್ಯ ನಿರ್ವಹಿಸಿದ ಅನುಭವವನ್ನು ಹೊಂದಿರುತ್ತಾರೆ ಎಂದು ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.