ಪುತ್ತೂರು: ಮುಕ್ರಂಪಾಡಿಯಲ್ಲಿರುವ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಿತು. ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರಿಣಾಕ್ಷ ಕೆ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಕಾಲೇಜು ಅಭಿವೃದ್ಧಿ ಸದಸ್ಯ ಹಾಗೂ ಉದ್ಯಮಿ ವಿ.ಕೆ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಕಲಿಕೆಯೊಂದಿಗೆ ಒಳ್ಳೆಯ ಗುಣಗಳನ್ನು ಮೈಗೊಡಿಸಿಕೊಳ್ಳಬೇಕೆಂದು ಹೇಳಿದರು. ನಿವೃತ್ತ ಪ್ರಾಧ್ಯಾಪಕ ವಿಷ್ಣು ಭಟ್ ಮಾತನಾಡಿ ಸಾಂಪ್ರದಾಯಿಕ ಆಚರಣೆಗಳ, ನೈತಿಕ ನೈರ್ಮಲ್ಯಗಳನ್ನು ವಿದ್ಯಾರ್ಥಿಗಳೆಲ್ಲರೂ ಅಳವಡಿಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕೆಂದು ಕರೆ ನೀಡಿದರು. ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷೆ ದೀಕ್ಷಾ ಪೈ ಮತ್ತು ಸದಸ್ಯ ಚಂದ್ರಕಾಂತ ನಾಯಕ್ ಉಪಸ್ಥಿತರಿದ್ದರು.
ಪ್ರಾಂಶುಪಾಲೆ ಪ್ರಮೀಳ ಜೆಸ್ಸಿ ಕ್ರಾಸ್ತಾ ವರದಿ ವಾಚಿಸಿದರು. ಭೂಮಿಕ ಪ್ರಾರ್ಥಿಸಿದರು. ಉಪನ್ಯಾಸಕಿ ಚಿತ್ರಲೇಖಾ ಕೆ. ಸ್ವಾಗತಿಸಿದರು, ಅಶೋಕ ಪಿ. ವಂದಿಸಿದರು ಶೋಭಾ ಕೆ. ಕಾರ್ಯಕ್ರಮ ನಿರೂಪಿಸಿದರು. ಜಯಲಕ್ಷ್ಮೀ ಕೆ, ಗ್ರೀಷ್ಮಾ, ಧನ್ಯಶ್ರೀ ಪಿ. ಮತ್ತು ದಾಮೋದರ ವಿಜೇತರ ಪಟ್ಟಿ ವಾಚಿಸಿದರು. ಭೋಜರಾಜ ಆಚಾರಿ ಕೆ.ರವರು ದತ್ತಿ ನಿಧಿ ನಗದು ಬಹುಮಾನ ಪಡೆದ ವಿದ್ಯಾರ್ಥಿನಿಯರ ಪಟ್ಟಿ ವಾಚಿಸಿದರು.