ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರು ನೇಮಕಗೊಂಡಿದ್ದಾರೆ.
ಜಯಪ್ರಕಾಶ್ ಬದಿನಾರು
ಕೋಡಿಂಬಾಡಿ ಗ್ರಾಮದ ಬದಿನಾರು ನಿವಾಸಿಯಾಗಿರುವ ಜಯಪ್ರಕಾಶ್ ಅವರು ಪ್ರಸ್ತುತ ಕೋಡಿಂಬಾಡಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಇಂಟಕ್ ತಾಲೂಕು ಘಟಕದ ಅಧ್ಯಕ್ಷರಾಗಿದ್ದಾರೆ. ಸೇಡಿಯಾಪು ಫ್ರೆಂಡ್ಸ್ ಕ್ಲಬ್ ಗೌರವಾಧ್ಯಕ್ಷರಾಗಿ, ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾಗಿ, ಕೋಡಿಂಬಾಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಉಪಾಧ್ಯಕ್ಷರಾಗಿ, ಜಯಕರ್ನಾಟಕ ಕೋಡಿಂಬಾಡಿ ಘಟಕದ ಗೌರವಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿರುವ ಜಯಪ್ರಕಾಶ್ ಬದಿನಾರುರವರು ಕಾಸರಗೋಡು ಚಿಪ್ಪಾರು ಕೋಟಿ ಚೆನ್ನಯ ಬ್ರಹ್ಮಬೈದೆರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ, ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿಯವರ ಸೂಚನೆ ಮತ್ತು ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಮ ಕೆ.ಬಿ.ಯವರ ಶಿಫಾರಸ್ಸಿನಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಅವರು ಜಯಪ್ರಕಾಶ್ ಬದಿನಾರು ಅವರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.