ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಿ.11ರಂದು ಸಂಕಷ್ಟ ಚತುರ್ಥಿ ದಿನದ ಅಂಗವಾಗಿ ಬೆಳಿಗ್ಗೆ ಗಣಪತಿ ಹೋಮ ನಡೆಯಲಿದೆ.
ಗಣಪತಿ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಅವರು ತಿಳಿಸಿದ್ದಾರೆ.