ತಾಲೂಕು ಆಡಳಿತದಿಂದ ಮಾನವ ಹಕ್ಕುಗಳು ದಿನಾಚರಣೆ

0

ಪುತ್ತೂರು; ಪುತ್ತೂರು ತಾಲೂಕು ಆಡಳಿತದ ವತಿಯಿಂದ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿ.10ರಂದು ತಾಲೂಕು ಆಡಳಿತ ಸೌಧದಲ್ಲಿರುವ ತಾಲೂಕು ಕಛೇರಿ ಸಭಾಂಗಣದಲ್ಲಿ ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ನಿಸರ್ಗಪ್ರಿಯ ಮಾತನಾಡಿ, ಜೀವನದ ಸ್ವಾತಂತ್ರ್ಯ ಮತ್ತು ವ್ಯಕ್ತಿಯ ಘನತೆಯ ಹಕ್ಕುಗಳೇ ಮಾನವ ಹಕ್ಕುಗಳಾಗಿದೆ. ಹಕ್ಕುಗಳ ಉಲ್ಲಂಘನೆ ಆಗುವುದನ್ನು ತಡೆಯುವುದು, ಹಕ್ಕುಗಳ ಉಲ್ಲಂಘನೆ ಆಗದಂತೆ ರಕ್ಷಣೆ ನೀಡುವುದು, ಹಕ್ಕುಗಳ ಉಲ್ಲಂಘನೆಗೆ ಒಳಗೊಂಡಿರುವವರಿಗೆ ನೆರವು ನೀಡುವುದು ಮಾನವ ಹಕ್ಕುಗಳ ಆಯೋಗದ ಉದ್ದೇಶವಾಗಿದೆ ಎಂದು ಹೇಳಿ ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಗ್ರೇಡ್-2 ತಹಶೀಲ್ದಾರ್ ಲೋಕೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಇಲಾಖಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ತಾಲೂಕು ಕಚೇರಿ ವಿಷಯ ನಿರ್ವಾಹಕ ದಯಾನಂದ ಸ್ವಾಗತಿಸಿ, ವಂದಿಸಿದರು. ಉಪತಹಶೀಲ್ದಾರ್ ಸುಲೋಚನ ಪಿ.ಕೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here