




ಪುತ್ತೂರು: ಸರಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿನ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಡಿ. 14ರಿಂದ ದ.ಕ. ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.



ಡಿ.14ರಿಂದ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಬಂಟ್ವಾಳ ತಾಲೂಕು ಕಛೇರಿ, ಡಿ.16ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಮಂಗಳೂರು ತಾಲೂಕು ಕಚೇರಿ ಹಾಗೂ ಡಿ.19ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ವರೆಗೆ ಪುತ್ತೂರು ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.












