ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ನೂತನ ಸಭಾಭವನ ಕಟ್ಟಡ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಯಶಸ್ವಿಯಾಗಿ ನಡೆದಿದ್ದು, ಗ್ರಾ.ಪಂ. ವ್ಯಾಪ್ತಿಯ ವರ್ತಕರ ಸಹಕಾರದಿಂದ ಇದು ಸಾಧ್ಯವಾಗಿದೆ. ಎಲ್ಲಾ ವರ್ತಕರ ಸಹಕಾರ, ಪ್ರೋತ್ಸಾಹ, ಗ್ರಾಮಸ್ಥರು ಬೆನ್ನೆಲುಬಾಗಿದ್ದ ಕಾರಣ ಕಾರ್ಯಕ್ರಮ ಸುಂದರವಾಗಿ,ಯಶಸ್ವಿಯಾಗಿ ಮೂಡಿಬರಲು ಸಾಧ್ಯವಾಗಿದೆ ಎಂದು ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ ಹೇಳಿದರು.
ಕಾಣಿಯೂರು ಗ್ರಾಮ ಪಂಚಾಯತ್ ನೂತನ ಸಭಾಭವನ ಕಟ್ಟಡ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದ ಲೆಕ್ಕಪತ್ರ ಮಂಡನೆ ಮತ್ತು ಕಾರ್ಯಕ್ರಮದ ಅಭಿನಂದನೆ ಸಭೆಯಲ್ಲಿ ಮಾತನಾಡಿದರು. ಕಾಣಿಯೂರು ಗ್ರಾ.ಪಂ.ಅಧ್ಯಕ್ಷೆ ಲಲಿತಾ ದರ್ಖಾಸು, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆನಂದ ಗೌಡ ಮೇಲ್ಮನೆ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷೆ ಧನಂಜಯ ಕೇನಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಸದಸ್ಯರು, ವರ್ತಕರು, ಗ್ರಾ.ಪಂ.ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾ.ಪಂ.ಸಿಬ್ಬಂದಿ ತಿಮ್ಮಪ್ಪ ಗೌಡ ಬೀರುಕುಡಿಕೆ ಕಾರ್ಯಕ್ರಮದ ಲೆಕ್ಕಪತ್ರ ಓದಿದರು. ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ದೇವರಾಜ್ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.