ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವ

0

ವಿಟ್ಲ: ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ವಾರ್ಷಿಕೋತ್ಸವ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರ್ಥಿ ನಾಯಕ ತೇಜಸ್ವಿ ತೆಂಕಬೈಲು ವಹಿಸಿದ್ದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುಣೆ ಬಿ.ಜೆ.ಮೆಡಿಕಲ್ ಕಾಲೇಜ್ ನ ಎಲುಬು ಮತ್ತು ಕೀಲು ತಜ್ಞ ಡಾ.ಶ್ರೀಶ ಪರ್ತಾಜೆ ಮಾತನಾಡಿ ನಿರಂತರ ಅಧ್ಯಯನ, ಪ್ರಯತ್ನ ಶೀಲತೆ, ಸಾಧಿಸುವ ಛಲವಿದ್ದಾಗ ಮಾತ್ರ ಬದುಕಿನ ಗುರಿ ಸಾಧಿಸಲು ಸಾಧ್ಯ ಎಂದರು. ವಾರ್ಷಿಕೋತ್ಸವವನ್ನು ವಿದ್ಯಾರ್ಥಿಗಳೇ ನಿರ್ವಹಿಸಿರುವುದು ವಿಶೇಷವಾಗಿದೆ.ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಗರಿಷ್ಠ ಮಟ್ಟದ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಲ್.ಎನ್.ಕೂಡೂರು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.ವಾರ್ಷಿಕೋತ್ಸವದಲ್ಲಿ 1065 ಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನ ನೀಡಿದರು.

ನಿರೀಕ್ಷಾ ಸ್ವಾಗತಿಸಿದರು. ಉಪ ನಾಯಕ ಯಶ್ ರಾಜ್ ವಂದಿಸಿದರು. ಶಾಲಾ ಪ್ರಾಂಶುಪಾಲ ಜಯರಾಮ ರೈ ವರದಿ ವಾಚಿಸಿದರು.ಮುಫಿಜಾ, ಶ್ರೇಯಸ್, ಭೂಮಿಕಾ, ಅರ್ಚನಾ ರಾವ್ ಸಹಕರಿಸಿದರು.

LEAVE A REPLY

Please enter your comment!
Please enter your name here