ಉದನೆ: ಕಾರಿನ ಹಿಂಬದಿಗೆ ಬೈಕ್ ಡಿಕ್ಕಿ-ದೂರು

0

ನೆಲ್ಯಾಡಿ: ಕಾರಿನ ಹಿಂಬದಿಗೆ ಬೈಕ್ ಡಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಉದನೆ ಎಂಬಲ್ಲಿ ಡಿ.10 ರಂದು ಸಂಜೆ ನಡೆದಿದೆ.

ಧರ್ಮಸ್ಥಳದಿಂದ ಹಾಸನಕ್ಕೆ ಹೋಗುತ್ತಿದ್ದ ಕಾರಿಗೆ( ಕೆಎ13 ಝೆಡ್ 5096 )ಹಿಂಬದಿಯಿಂದ ಬಂದ ಬೈಕ್ (ಕೆಎ 03 ಕೆಜೆ 6625 )ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಹಾಗೂ ಸಹಸವಾರ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಕಾರು ಮತ್ತು ಬೈಕ್ ಜಖಂಗೊಂಡಿದೆ.

ಬೈಕ್ ಸವಾರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಬೈಕ್ ಚಲಾಯಿಸಿಕೊಂಡು ಬಂದು ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದಿರುವುದಾಗಿ ಕಾರು ಚಾಲಕ ಹಾಸನ ತಾಲೂಕಿನ ಹೂವಿನಹಳ್ಳಿ ನಿವಾಸಿ ಆದಿತ್ಯ ಹೆಚ್.ಆರ್.ಎಂಬವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here