ದ.15-17:ಸುದಾನ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

0

ಪುತ್ತೂರು: “ಜ್ಞಾನೋದಯಕ್ಕಾಗಿ ಶಿಕ್ಷಣ “(Education for enlightenment)” ಎಂಬ ಉನ್ನತ ಧ್ಯೇಯವನ್ನಿರಿಸಿಕೊಂಡು ರಜತ ವರ್ಷಗಳನ್ನು ದಾಟಿ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯನ್ನು ಶಿಸ್ತುಬದ್ಧವಾಗಿ ಸಾಧಿಸುವಲ್ಲಿ ಸಫಲತೆಯನ್ನು ಸಾಧಿಸಿರುವ ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಯಾಗಿರುವ ಸುದಾನ ವಸತಿಯುತ ಶಾಲೆಯಲ್ಲಿ ದ.15 ರಿಂದ 17ರ ವರೆಗೆ ವಾರ್ಷಿಕೋತ್ಸವದ ಸಂಭ್ರಮ ಜರಗಲಿದೆ.

ದ.15 ರಂದು ಜ್ಯೂನಿಯರ್ ವಿಭಾಗದ ವಾರ್ಷಿಕೋತ್ಸವ ಜರಗಲಿದ್ದು, ಅಧ್ಯಕ್ಷತೆಯನ್ನು ಶಾಲಾ ಹಿರಿಯ ವಿದ್ಯಾರ್ಥಿ ಪ್ರಸ್ತುತ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆದ್ಯಾ ಸುಲೋಚನಾ ಮುಳಿಯರವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅವನಿ ಕೋಡಿಬೈಲುರವರು ಭಾಗವಹಿಸಲಿರುವರು. ದ.16 ರಂದು ಸೀನಿಯರ್ ವಿಭಾಗದ ವಾರ್ಷಿಕೋತ್ಸವ ಜರಗಲಿದ್ದು, ಅಧ್ಯಕ್ಷತೆಯನ್ನು ಶಾಲಾ ಹಿರಿಯ ವಿದ್ಯಾರ್ಥಿ ಪ್ರಸ್ತುತ ಮಹಾವೀರ ಆಸ್ಪತ್ರೆಯಲ್ಲಿ ಮೂಳೆ ಚಿಕಿತ್ಸಾ ತಜ್ಞರಾದ ಡಾ.ಸಚಿನ್ ಶಂಕರ್ ಹಾರಕೆರೆರವರು ವಹಿಸಲಿರುವರು. ಮುಖ್ಯ ಅತಿಥಿಯಾಗಿ ಉಜಿರೆ ಎಸ್‌ಡಿಎಂ ಪದವಿ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾಯಯನ ಸಿ.ಎರವರು ಭಾಗವಹಿಸಲಿದ್ದಾರೆ.

ದ.17 ರಂದು ಶಾಲೆಯ ಸಾಧಕರ ಸಮಾರಂಭ ಜರಗಲಿದ್ದು, ಅಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲ ಹಾಗೂ ಆಂಗ್ಲ ಭಾಷಾ ಪ್ರಾಧ್ಯಾಪಕ ಮತ್ತು ಸುದಾನ ಶಾಲೆಯ ಶೈಕ್ಷಣಿಕ ಸಲಹೆಗಾರರಾಗಿರುವ ಡಾ.ಮಾಧವ ಎಚ್.ಭಟ್‌ರವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿರವರು ಭಾಗವಹಿಸಲಿರುವರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಲಿದೆ ಎಂದು ಶಾಲಾ ಸಂಚಾಲಕ ರೆ|ವಿಜಯ ಹಾರ್ವಿನ್, ಕಾರ್ಯದರ್ಶಿ ಡಾ|ಪೀಟರ್ ವಿಲ್ಸನ್ ಪ್ರಭಾಕರ್, ಕೋಶಾಧಿಕಾರಿ ಆಸ್ಕರ್ ಆನಂದ್, ಮುಖ್ಯ ಶಿಕ್ಷಕಿ ಶೋಭಾ ನಾಗಾರಾಜ್, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಡಾ|ರಾಜೇಶ್ ಬೆಜ್ಜಂಗಳರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here