ಪುತ್ತೂರು; ಗ್ರಾಮ ಪಂಚಾಯತ್ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಡಿ.19ರಿಂದ ನಡೆಯಲಿರುವ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ನೀಡುವುದು ಹಾಗೂ ಅಧಿವೇಶನದಲ್ಲಿ ಪ್ರಸ್ತಾಪಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಘದ ಪುತ್ತೂರು ತಾಲೂಕು ಘಟಕದ ವತಿಯಿಂದ ಶಾಸಕ ಸಂಜೀವ ಮಠಂದೂರು ರವರಿಗೆ ಮನವಿ ಸಲ್ಲಿಸಿದರು.
ನೌಕರರ ಸಂಘದ ಮನವಿಗೆ ಸ್ಪಂದಿಸಿದ ಸಂಜೀವ ಮಠಂದೂರು ಅಧಿವೇಶನದಲ್ಲಿ ಪ್ರಸ್ತಾಪಿಸಿ ನೌಕರರ ಸಮಸ್ಯೆಗಳ ಈಡೇರಿಕೆಗೆ ಧ್ವನಿಯಾಗುವ ಮೂಲಕ ಬೇಡಿಕೆ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷ ಹೊನ್ನಪ್ಪ ಪ್ರಧಾನ ಕಾರ್ಯದರ್ಶಿ ಶಶಿಧರ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಮತ್ತು ಉಪಸ್ಥಿತರಿದ್ದರು.