ಡಿ.17: ಬೆಳ್ಳಿಪ್ಪಾಡಿ ಶಾಲಾ ವಠಾರದಲ್ಲಿ ಪುತ್ತೂರು ತಹಶೀಲ್ದಾರ್‌ರವರಿಂದ ಗ್ರಾಮ ವಾಸ್ತವ್ಯ

0

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಹಿ.ಪ್ರಾ.ಶಾಲಾ ವಠಾರದಲ್ಲಿ ಪುತ್ತೂರು ತಾಲೂಕು ತಹಶೀಲ್ದಾರ್ ನಿಸರ್ಗಪ್ರಿಯರವರಿಂದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಡಿ.17ರಂದು ಬೆಳಿಗ್ಗೆ 10ರಿಂದ ನಡೆಯಲಿದೆ.

ಗ್ರಾಮ ವಾಸ್ತವ್ಯದಲ್ಲಿ ತಹಶೀಲ್ದಾರ್‌ರವರು ಕಂದಾಯ ಇಲಾಖೆ ಮತ್ತು ಇತರ ಇಲಾಖೆಗಳ ವಿವಿಧ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ. ಪುತ್ತೂರು ತಾಲೂಕಿನ ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ತಮ್ಮ ಇಳಾಕೆಯಿಂದ ಸಾರ್ವಜನಿಕರಿಗೆ ಒದಗಿಸಲಾಗುವ ಸವಲತ್ತುಗಳ ಬಗ್ಗೆ ಮಾಹಿತಿ ನನೀಡಲಿದ್ದಾರೆ. ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಅರ್ಜಿ ಪಡೆದು ಅರ್ಹ ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲು ಕ್ರಮ ಜರಗಿಸಲಿದ್ದಾರೆ. ಆದುದರಿಂದ ಕೋಡಿಂಬಾಡಿ ಮತ್ತು ಬೆಳ್ಳಿಪ್ಪಾಡಿ ಗ್ರಾಮದ ಸಾರ್ವಜನಿಕರು ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here