ಪೆರಾಬೆ: ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದ.ಕ. ಮಂಗಳೂರು, ಲಯನ್ಸ್ ಕ್ಲಬ್ ಗಾಂಧಿನಗರ ಮತ್ತು ಶಿಶು ಕೇಂದ್ರಿಕೃತ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಕಡಬ ತಾಲೂಕು ಪೆರಾಬೆ ಗ್ರಾ.ಪಂ.ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮುತ್ತಪ್ಪ ಗೌಡರವರನ್ನು ವಿಕಲಚೇತನರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.