ರಾಮಕುಂಜ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘ, ವಿವಿಧ ಸಂಘಗಳ ಉದ್ಘಾಟನೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.


ನೆಲ್ಯಾಡಿ ಸಂತಜಾರ್ಜ್ ಪ.ಪೂ.ಕಾಲೇಜಿನ ಉಪನ್ಯಾಸಕ ಚೇತನ್ ಆನೆಗುಂಡಿಯವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ತಮ್ಮ ವಿದ್ಯಾರ್ಥಿ ಜೀವನದ ನೆನಪುಗಳನ್ನು ಹಂಚಿಕೊಳ್ಳುತ್ತಾ ಅತಿಯಾದ ಆತ್ಮವಿಶ್ವಾಸ ನಮ್ಮ ಅಭಿವೃದ್ಧಿಗೆ ನಾಶಕವಾಗಿ ಪರಿಣಮಿಸುತ್ತದೆ. ನಮ್ಮನ್ನು ಪರಿಪೂರ್ಣವಾಗಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ಆಂತರ್ಯದ ಪೂರ್ಣ ಶಕ್ತಿಯನ್ನು ಉಪಯೋಗಿಸಿಕೊಳ್ಳುವ ಅವಶ್ಯಕತೆ, ಸಮಯ-ಸಂಪತ್ತುಗಳ ಸದ್ವಿನಿಯೋಗ, ಸಂವಹನ ಚಾತುರ್ಯದ ಅವಶ್ಯಕತೆ ಕುರಿತು ಅವರು ಮಾತನಾಡಿದರು. ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್‌ರವರು ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಗಣರಾಜ ಕುಂಬ್ಳೆ ಅವರು ಅಧ್ಯಕ್ಷತೆ ವಹಿಸಿದ್ದರು.

ಉಪನ್ಯಾಸಕ ಕೃಷ್ಣಪ್ರಸಾದ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ದಿವಾಕರ್ ಪ್ರತಿಜ್ಞಾ ವಿಧಿ ಬೋಧಿಸಿದರು. ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದಲ್ಲಿ ತೃತೀಯ ಸ್ಥಾನಿಗಳಾದ ಓಟಗಾರರಿಗೆ ಗೌರವ, ಅಗ್ನಿಪಥ್ ಯೋಜನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಜಯಪ್ರಕಾಶ್‌ರನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿ ಸಂಘದ ನಾಯಕಿ ಸ್ವಪ್ನಾ ಸ್ವಾಗತಿಸಿ ಕಾರ್ಯದರ್ಶಿ ಪವನ್ ವಂದಿಸಿದರು. ಅದಿತಿ ನಿರೂಪಿಸಿದರು. ಅಮೃತ ಮತ್ತು ಬಳಗದವರು ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here