ಬನ್ನೂರು ವಿದ್ಯಾರ್ಥಿನಿ ನಿಲಯದಲ್ಲಿ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ

0

ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ನವೋದಯ ಮಹಿಳಾ ಮಂಡಲ, ನವೋದಯ ಯುವಕ ಮಂಡಲದ ಸಂಯುಕ್ತ ಆಶ್ರಯದಲ್ಲಿ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರವು ಡಿ.11ರಂದು ಬನ್ನೂರು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿ ನಡೆಯಿತು.


ನವೋದಯ ಮಹಿಳಾ ಮಂಡಳಿಯ ಗೌರವಾಧ್ಯಕ್ಷೆ ಮತ್ತು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆಯಾಗಿರುವ ಗೌರಿ ಹೆಚ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನವೋದಯ ಮಹಿಳಾ ಮಂಡಳಿ ಅಧ್ಯಕ್ಷ ಮಾಲತಿ ಆನಂದ್ ಅವರು ಅಧ್ಯಕ್ಷತೆ ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮೇಲ್ವಿಚಾರಕ ಶ್ರೀಕಾಂತ್ ಬಿರಾವು ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಯುವಕ ಮಂಡಲದ ಅಧ್ಯಕ್ಷ ರಾಧಾಕೃಷ್ಣ ರೈ, ಸದಸ್ಯರಾದ ರಾಧಾಕೃಷ್ಣ ಗೌಡ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಿಲಯದ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ನವೋದಯ ಮಹಿಳಾ ಮಂಡಲದ ಸದಸ್ಯೆ ಮಮತಾ ಶೆಟ್ಟಿ ವಂದಿಸಿದರು. ಕಾರ್ಯದರ್ಶಿ ಸುಲೋಚನಾ ರಾಧಾಕೃಷ್ಣ ಕಾರ್ಯಕ್ರಮ ನಿರೂಪಿಸಿದರು. ಸದಸ್ಯೆ ಪ್ರೇಮಲತಾ ನಂದಿಲ ಸಹಕರಿಸಿದರು.

LEAVE A REPLY

Please enter your comment!
Please enter your name here