





ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ಸದಸ್ಯರಿಂದ ತಿಂಗಳ ಸರಣಿ ಕಾರ್ಯಕ್ರಮ ಪ್ರಯುಕ್ತ, ತಾಳಮದ್ದಳೆ” ಶರಸೇತು ಬಂಧ ‘ ಪ್ರಸಂಗ ನಡೆಯಿತು.



ಹಿಮ್ಮೇಳದಲ್ಲಿ ಭಾಗವತರಾಗಿ ಕುಸುಮಾಕರ ಆಚಾರ್ಯ ಆಲಂಕಾರು, ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಗುರುಮೂರ್ತಿ ಅಮ್ಮಣ್ಣಾಯ ಸಹಕರಿಸಿದರು. ಹಿಮ್ಮೇಳದಲ್ಲಿ ಶ್ರೀಮತಿ ಶುಭಾಅಡಿಗ (ಹನುಮಂತ), ಶ್ರೀಮತಿ ಕಿಶೋರಿ ದುಗ್ಗಪ್ಪ (ಅರ್ಜುನ), ಶ್ರೀಮತಿ ಹರಿಣಾಕ್ಷಿ ಜೆ ಶೆಟ್ಟಿ( ವೃದ್ಧ ವಿಪ್ರ ), ಶ್ರೀಮತಿ ಶಾರದ ಅರಸ್ (ಶ್ರೀ ರಾಮ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ಗೌರವ ಕಾರ್ಯದರ್ಶಿ ರಂಗನಾಥ ರಾವ್ ವಂದಿಸಿದರು.














