ಡಿ.16ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಕುಂಕುಮಾರ್ಚನೆ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಡಿ.16ರಂದು ಸಂಜೆ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.


ಕಾರ್ಯಕ್ರಮದಲ್ಲಿ ಭಾಗವಹಿಸುವವರು ಎರಡು ಸಣ್ಣ ಹರಿವಾಣ, ನಾಣ್ಯ, ಲಲಿತ ಸಹಸ್ರನಾಮ ಪುಸ್ತಕ ತರಬೇಕು. ಮಾತಾ ಭಗಿನಿಯರು, ಕುಮಾರಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here