ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತಿಯ ದೂರದೃಷ್ಟಿ ಯೋಜನೆ ಸಿದ್ದಪಡಿಸುವ ಬಗ್ಗೆ ವಿಶೇಷ ಗ್ರಾಮ ಸಭೆ ದ.17 ರಂದು ಬೆಳಿಗ್ಗೆ ಕುಂಬ್ರ ರೈತ ಸಭಾ ಭವನದಲ್ಲಿ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರ ಮಾರ್ಗದರ್ಶನದಲ್ಲಿ, ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರುರವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ಅಧಿನಿಯಮ 1993 ರ ಮತ್ತು ಸರಕಾರದ ನಿರ್ದೇಶನದಂತೆ ಗ್ರಾಮ ಪಂಚಾಯತಿಯ ಮುಂದಿನ 5 ವರ್ಷಗಳ ಅವಧಿಗೆ ದೂರದೃಷ್ಟಿ ಯೋಜನೆ ಸಿದ್ದಪಡಿಸುವ ಬಗ್ಗೆ ಸಭೆ ನಡೆಯಲಿದೆ.
ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಮಗಾರಿಗಳ ಬೇಡಿಕೆ ಮತ್ತು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಉಪಾಧ್ಯಕ್ಷೆ ಸುಂದರಿ, ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಕಾರ್ಯದರ್ಶಿ ಜಯಂತಿ ಹಾಗೂ ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.