![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ವಿಟ್ಲ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ ಸುಳ್ಯದಲ್ಲಿ ಜರುಗಿದ ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ 2022 ರ ಪ್ರೌಢವಿಭಾಗದ ಅರೆಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಜ್ಮಲ್ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
![](https://puttur.suddinews.com/wp-content/uploads/2022/12/IMG-20221214-WA0006.jpg)
ಡಿ.13ರಂದು ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಪ್ರತಿಭಾಕಾರಂಜಿ ಸ್ಪರ್ಧಾ ಕಾರ್ಯಕ್ರಮ ನಡೆದಿದ್ದು, ಅರೆಬಿಕ್ ಧಾರ್ಮಿಕ ಪಠಣದಲ್ಲಿ ಅಜ್ಮಲ್ ಪ್ರಥಮ ಸ್ಥಾನ ಪಡೆದಿದ್ದಾರೆ. ಅಜ್ಮಲ್ ರವರು ಮಾಣಿ ನಿವಾಸಿ ಮೊಹಮ್ಮದ್ ಇಬ್ರಾಹಿಂ ಹಾಗೂ ಝೈನಬಾ ದಂಪತಿಯ ಪುತ್ರರಾಗಿದ್ದಾರೆ.