ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದ ಬಹುಮಾನ ವಿತರಣಾ ಕಾರ್ಯಕ್ರಮವು ಡಿ.14ರಂದು ನಡೆಯಿತು.
ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಎಲ್.ಕೆ.ಜಿಯಿಂದ 10ನೇ ತರಗತಿಯವರೆಗೆ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಕನ್ನಡ ಉಪನ್ಯಾ ಸಕ ಮಹಲಿಂಗೇಶ್ವರ ಭಟ್, ವಿದ್ಯಾರ್ಥಿಗಳು ವಿದ್ಯಾರ್ಜನೆಯೊಂದಿಗೆ ಉತ್ತಮ ಗುಣನಡೆತಗಳನ್ನು ಬೆಳೆಸಿಕೊಳ್ಳಬೇಕು ಎಂದರು.
ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿದ ವಿವೇಕನಂದ ಕಾಲೇಜಿನ ಸ್ನಾತ್ತಕೋತ್ತರ ಪದವಿ ವಿಭಾಗದ ಮುಖ್ಯಸ್ಥ ಡಾ| ವಿದ್ಯಾಸರ ಸ್ವತಿ ಇವರು ಮಾತನಾಡಿ ಮೌಲ್ಯ ಚಿಂತನೆಗಳನ್ನು ಹಾಗೂ ನಮ್ಮ ಸಂಸ್ಕ್ರತಿಯನ್ನು ಹೆಮ್ಮೆಯಿಂದ ಆಧರಿಸಿ ಜಗತ್ತಿಗೆ ಮಾರ್ಗದರ್ಶಕರಾಗಿರಬಲ್ಲಂತಹ ಮುಂದಿನ ಜನಾಂಗ ನೀವಾಗ ಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಕರುಣಾಕರ ಸುವರ್ಣ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಶಿಕ್ಷಕ- ಶಿಕ್ಷಕೇತರ ವೃಂದದವರು, ಪಾಲಕರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮವನ್ನು ಸಂ ಸ್ಥಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ಸ್ವಾಗತಿಸಿ, ಸಹ ಶಿಕ್ಷಕಿ ಶಶಿಕಲಾ ವಂದಿಸಿದ್ದರು. ಸಹಶಿಕ್ಷಕಿಯರಾದ ಶ ದೀಕ್ಷಿತಾ ಹಾಗೂ ನೇಹಾ ಕಾರ್ಯಕ್ರಮ ನಿರೂಪಿಸಿದರು.