ಕೊಂಡಾಡಿಕೊಪ್ಪ ಶಾಲೆಯ ಶಿಕ್ಷಕ ಜಯಂತ್ ವೈ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ

0

ಕಾಣಿಯೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ,ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್,ಮಂಗಳೂರು ಮಹಾನಗರ ಪಾಲಿಕೆ ,ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,ರಾಜ್ಯ ಸರ್ಕಾರಿ ನೌಕರರ ಸಂಘ ದಕ್ಷಿಣ ಕನ್ನಡ ಶಾಖೆ ಮಂಗಳೂರು ಇವರ ಆಶ್ರಯದಲ್ಲಿ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕೊಂಡಾಡಿಕೊಪ್ಪ ಶಾಲೆಯ ಶಿಕ್ಷಕ ಜಯಂತ್ ವೈ 800 ಮೀಟರ್ ಮತ್ತು 400 ಮೀಟರ್ ಓಟ ಹಾಗೂ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ರಾಜ್ಯ ಯೋಗ ಸಂಪನ್ಮೂಲ ವ್ಯಕ್ತಿಯಾಗಿದ್ದು,ಶಿಕ್ಷಣ ಇಲಾಖೆಯು ಕೊಡಮಾಡುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತರಾಗಿರುತ್ತಾರೆ.

LEAVE A REPLY

Please enter your comment!
Please enter your name here