ಪುತ್ತೂರು: ಕೆಮ್ಮಾಯಿ ಕೃಷ್ಣನಗರದಲ್ಲಿರುವ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಡಿ.16ರಂದು ಸನ್ಮಾನ, ಪ್ರತಿಭಾಪುರಸ್ಕಾರ ಹಾಗು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
ಬೆಳಿಗ್ಗೆ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಧ್ವಜಾರೋಹಣ ಮಾಡಲಿದ್ದು, ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ನೆಲ್ಲಿಕಟ್ಟೆ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ವೇಗಸ್, ಕೃಷ್ಣನಗರ ಕ್ಯಾಶ್ಯೂ ಇಂಡಸ್ಟ್ರೀಸ್‌ನ ವ್ಯವಸ್ಥಾಪಕ ವಿಲ್ಫ್ರೆಡ್ ಡಿಸೋಜ, ಶಾಲಾ ಸಂಸ್ಥಾಪಕ ವಿಜಯ ಹೇಮಚಂದ್ರ ಆಳ್ವ, ನಗರಸಭೆ ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ ಶೆಟ್ಟಿ, ಕೋಡಿಂಬಾಡಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಅಶ್ರಫ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಕೆ.ಹರೀಶ್ ಆಚಾರ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ ಕೃಷ್ಣನಗರ ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಮತ್ತು ಕೆಮ್ಮಾಯಿ ಶಾಲೆಯ ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಸಂಜೀವ ಮಠಂದೂರು ಉದ್ಘಾಟಿಸಲಿದ್ದಾರೆ. ನಗರಸಭಾ ಸದಸ್ಯರಾದ ಲೀಲಾವತಿ, ಸುಂದರ ಪೂಜಾರಿ ಬಡಾವು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ತಾಲೂಕು ಅಕ್ಷರದಾಸೋಹ ಸಹಾಯಕ ನಿರ್ದೇಶಕ ವಿಷ್ಣಪ್ರಸಾದ್ ಸಿ, ಸಂತ ಆಂತೋನಿ ಚರ್ಚ್ ಬನ್ನೂರು ಇಲ್ಲಿನ ಧರ್ಮಗುರು ರೇ ಫಾ| ಪ್ರಶಾಂತ್ ಫೆರ್ನಾಂಡೀಸ್, ಅಡಿಕೆ ವ್ಯಾಪಾರಸ್ಥರಾದ ಉದ್ಯಮಿ ಹಸನ್, ದ್ವಾರಕ ಕನ್‌ಸ್ಟ್ರಕ್ಷನ್‌ನ ಗೋಪಾಲಕೃಷ್ಣ ಭಟ್, ಆರ್.ಕೆ.ಸೆಂಟರ್‌ನ ಹನೀಫ್, ಬನ್ನೂರು ರೈತ ಸೇ.ಸ.ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಎಸ್.ಆರ್.ಕೆ.ಲ್ಯಾಡರ‍್ಸ್‌ನ ಮಾಲಕ ಕೇಶವ ಎ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಾಲಾ ಎಸ್‌ಡಿಎಮ್‌ಸಿ ಅಧ್ಯಕ್ಷ ಕೆ.ಗೋಪಾಲ ಪೂಜಾರಿ ಮತ್ತು ಮುಖ್ಯಗುರು ಮರಿಯಮ್ಮ ಪಿ.ಎಸ್ ತಿಳಿಸಿದ್ದಾರೆ.