ಡಿ.16: ಆಲಂಕಾರಿನಲ್ಲಿ ಉಚಿತ ನೇತ್ರ ಚಿಕಿತ್ಸೆ, ಶಸ್ತ್ರ ಚಿಕಿತ್ಸಾ ಶಿಬಿರ

0

ಆಲಂಕಾರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ಆಲಂಕಾರು ಇದರ ಆಶ್ರಯದಲ್ಲಿ ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ, ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಮತ್ತು ಗ್ರಾಮ ಪಂಚಾಯತ್ ಆಲಂಕಾರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ಡಿ.16 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ರ ತನಕ ಆಲಂಕಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣರವರು ಉದ್ಘಾಟಿಸಲಿದ್ದಾರೆ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮುತ್ತಪ್ಪ ಪೂಜಾರಿ ನೆಯ್ಯಲ್ಗ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್‌ನ ಡಾ.ಗೌರಿ ಪೈ, ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ನೇತ್ರಾಧಿಕಾರಿಗಳಾದ ಡಾ.ಶಾಂತರಾಮ್, ಡಾ.ಅನಿಲ್ ರಾಮನುಜಮ್, ಆಲಂಕಾರು ಗ್ರಾ.ಪಂ.ಅಧ್ಯಕ್ಷ ಸದಾನಂದ ಆಚಾರ್ಯ, ಕೊಲ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್, ಶ್ರೀ ಕ್ಷೇತ್ರ ಶರವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ, ಆಲಂಕಾರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಲಿಂಗಪ್ಪ ಪೂಜಾರಿ, ಯುವವಾಹಿನಿ ಕಡಬ ಘಟಕದ ಅಧ್ಯಕ್ಷ ಕೃಷ್ಣಪ್ಪ ಅಮೈ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಶೆಟ್ಟಿ ಹೊಸಮನೆ ಅವರಿಗೆ ಸಮಾರಂಭದಲ್ಲಿ ಸನ್ಮಾನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here