ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಾರ್ಷಿಕೋತ್ಸವ ದ. 16 ರಂದು ಜರಗಲಿದೆ. ಸಂಜೆ 4 ಗಂಟೆಗೆ ಮಕ್ಕಳ ನಲಿವಿನ ಹಬ್ಬ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಸಂಸ್ಥೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಲಿದೆ.
ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಹಿರಿಯ ವಿದ್ಯಾರ್ಥಿನಿ ಜಯಾ ಪೈ, `ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತ ದಂಬೆಕ್ಕಾನ ಸದಾಶಿವ ರೈ, ಉದ್ಯಮಿ ಸಂಜೀವ ಆಳ್ವ, ಶ್ರೀ ರಾಮಕೃಷ್ಣ ಪ್ರೌಢಶಾಲೆಯ ವಿಶ್ರಾಂತ ಮುಖ್ಯಗುರುಗಳಾದ ಎನ್.ಮನೋಹರ ರೈ, ರೂಪಕಲಾ ಕೆ, ವಿಶ್ರಾಂತ ವಿಜ್ಞಾನ ಶಿಕ್ಷಕಿ ವಸಂತಿ ಕೆದಿಲ, ವಿಶ್ರಾಂತ ಕಲಾ ಶಿಕ್ಷಕಿ ವನಿತಾ ಕುಮಾರಿ, ಡಾ.ಬಿ.ನಳಿನಿ ರೈಯವರ ಪುತ್ರಿ ಪ್ರತಿಮಾ ಹೆಗ್ಡೆರವರು ಭಾಗವಹಿಸಲಿದ್ದಾರೆ ಸಭಾ ಕಾರ್ಯಕ್ರಮದ ಬಳಿಕ ಮಕ್ಕಳ ನಲಿವಿನ ಹಬ್ಬ ಮುಂದುವರಿಯಲಿದೆ ಎಂದು ಸಂಸ್ಥೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಮುಖ್ಯಶಿಕ್ಷಕಿ ಜಯಲಕ್ಷ್ಮಿ ಹಾಗೂ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಡಾ.ಶ್ರೀಪ್ರಕಾಶ್ರವರು ತಿಳಿಸಿದ್ದಾರೆ.