




ಪುತ್ತೂರು: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡಿ, ಲವ್ ಜಿಹಾದ್ ಘಟನೆಗಳನ್ನು ತಡೆಯಲು ವಿಶೇಷ ’ಲವ್ ಜಿಹಾದ್ ವಿರೋಧಿ ಪೊಲೀಸ್ ದಳ’ವನ್ನು ಸ್ಥಾಪಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಡಿ.15ರಂದು ಕಿಲ್ಲೆ ಮೈದಾನದ ಅಮರ್ ಜವಾನ್ ಸ್ಮಾರಕ ಜ್ಯೋತಿ ಬಳಿ ಪ್ರತಿಭಟನೆ ನಡೆಯಿತು.









ಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಲವ್ ಜಿಹಾದ್ ತಡೆಯಲು ಸಾಧ್ಯವಾಗುತ್ತಿಲ್ಲ, ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಇಸ್ಲಾಮ್‌ಗೆ ಮತಾಂತರ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಈ ಘಟನೆಗಳು ಮತಾಂತರ ಪ್ರಕರಣವೆಂದು ದಾಖಲಾಗುವುದಿಲ್ಲ. ಈ ಗಂಭೀರ ಸಮಸ್ಯೆಗೆ ಪರಿಹಾರವಾಗಿ ರಾಜ್ಯದಲ್ಲಿ ಉತ್ತರ ಪ್ರದೇಶದ ಮಾದರಿಯ ಮತಾಂತರ ನಿಷೇಧ ಕಾಯಿದೆಯನ್ನು ಕಠಿಣವಾಗಿ ಅನುಷ್ಠಾನ ಮಾಡಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್‌ದಳ’ ವನ್ನು ಸ್ಥಾಪನೆ ಮಾಡಬೇಕೆಂದು ಆಗ್ರಹಿಸಿಸಲಾಯಿತು.
ಹಿಂದೂ ಜನಜಾಗೃತಿ ಸಮಿತಿ ಉಜಿರೆ ಘಟಕ ಸಮನ್ವಯಕಾರ ದಾಮೋದರ್ ಅವರು ಮಾತನಾಡಿ ದೆಹಲಿಯ ಜಹಾದಿ ಆಪ್ತಾಬ್ ಹಿಂದೂ ಯುವತಿಯನ್ನು 30 ತುಂಡುಗಳಾಗಿ ಕತ್ತರಿಸಿದ ಘಟನೆಯ ನಂತರ ದೇಶಾದ್ಯಂತ ಲವ್ ಜಹಾದ್ ವಿರುದ್ಧ ತೀವ್ರ ಆಕ್ರೋಶದ ಅಲೆ ಹಬ್ಬಿದೆ. ಕರ್ನಾಟಕದಲ್ಲೂ ಸಹ ಲವ್ ಜಿಹಾದ್ ಘಟನೆಗಳು ಹೆಚ್ಚಾಗಿದೆ. ಕರ್ನಾಟಕದಲ್ಲಿ 2014 ರಿಂದ 2019 ರ ವರೆಗೆ 21,000 ಯುವತಿಯರು ನಾಪತ್ತೆಯಾಗಿದ್ದಾರೆ. ಈ ಎಲ್ಲಾ ಗಂಭೀರ ಘಟನೆಗಳನ್ನು ಗಮನಕ್ಕೆ ತೆಗೆದುಕೊಂಡು ಸರಕಾರವು ರಾಜ್ಯದಿಂದ ಮಹಿಳೆಯರು ಮತ್ತು ಹುಡುಗಿಯರ ನಾಪತ್ತೆಯ ಹಿಂದೆ ಏನಾದರೂ ಪಿತೂರಿ ಇದೆಯೇ ಅಥವಾ ಅದರ ಹಿಂದೆ ಯಾವುದಾದರೂ ’ಲವ್ ಜಿಹಾದ್’ ಇದೆಯೇ ಎಂದು ತನಿಖೆ ಮಾಡಲು ಗೃಹ ಕಚೇರಿ ಸ್ವತಂತ್ರ ತಂಡವನ್ನು ನೇಮಿಸಬೇಕು, ’ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶದ ಮಾದರಿಯಲ್ಲಿ ’ಪೊಲೀಸ್ ವಿಶೇಷ ಶಾಖೆ’ಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಹಿಂದೂ ಜನಜಾಗೃತಿ ಸಮಿತಿಯ ದಯಾನಂದ, ಬಾಲಕೃಷ್ಣ ನೆಲ್ಯಾಡಿ, ಹರಿಪ್ರಸಾದ್ ನೆಲ್ಲಿಕಟ್ಟೆ, ಬಿಜೆಪಿ ಪ್ರಮುಖ ಸತೀಶ್ ನಾಯ್ಕ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.









