ಬಂಟರಯಾನೆ ನಾಡವರ ಮಾತೃಸಂಘ ಉಪಾಧ್ಯಕ್ಷರಾಗಿ ಎರಡನೇ ಬಾರಿಗೆ ಕಾವು ಹೇಮನಾಥ ಶೆಟ್ಟಿ ಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲಾ ವ್ಯಾಪ್ತಿಯನ್ನೊಳಗೊಂಡ ಬಂಟರಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ ಎರಡನೇ ಬಾರಿಗೆ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಎರಡು ಬಾರಿ ಕಾರ್ಯದರ್ಶಿಯಾಗಿ ಸಂಘದಲ್ಲಿ ಸೇವೆ ಸಲ್ಲಿಸಿದ್ದ ಹೇಮನಾಥ ಶೆಟ್ಟಿಯವರು ಕಳೆದ ಅವಧಿಯಲ್ಲಿ ಉಪಾಧ್ಯಕ್ಷರಾಗಿ ಅಯ್ಕೆಯಾಗಿದ್ದರು. ಸುಮಾರು 26 ಸಾವಿರಕ್ಕೂ ಮಿಕ್ಕಿ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃಸಂಘವು ಸರಿಸುಮಾರು 115 ವರ್ಷಗಳ ಇತಿಹಾಸವನ್ನು ಹೊಂದಿರುತ್ತದೆ.ಮೂರು ವರ್ಷಗಳ ಅವಧಿಗೆ ಈ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಂಘದಲ್ಲಿ ನಡೆಯುತ್ತದೆ.

ಪುತ್ತೂರಿನ ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾಗಿ ಶಾಲೆಯನ್ನು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಖ್ಯಾತಿ ಇವರಿಗೆ ಸಲ್ಲುತ್ತದೆ. ಲಯನ್ಸ್ ಪ್ರಾಂತೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು ತನ್ನ ಅವಧಿಯಲ್ಲಿ 5 ಹೊಸ ಕ್ಲಬ್‌ಗಳನ್ನು ರಚನೆಗೆ ಕಾರಣಕರ್ತರಾಗಿದ್ದರು.

ರಾಜಕೀಯ ಕ್ಷೇತ್ರದಲ್ಲಿ ಕೆಪಿಸಿಸಿ ಸಂಯೋಜಕರಾಗಿರುತ್ತಾರೆ. ಕಾವು ಸರಕಾರಿ ಹಿ ಪ್ರಾ ಶಾಲೆಯನ್ನು ದತ್ತು ತೆಗೆದುಕೊಳ್ಳುವ ಮೂಲಕ ಶಾಲೆಯಲ್ಲಿ ಆಂಗ್ಲ ಮಾದ್ಯಮ ಎಲ್‌ಕೆಜಿ ಯುಕೆಜಿ ತರಗತಿಯನ್ನು ಪ್ರಾರಂಭ ಮಾಡುವ ಮೂಲಕ ಕಾವು ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪುಗೊಳಿಸಿದ್ದರು.

ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಇವರು ಹಲವಾರು ದೇವಸ್ಥಾನಗಳ ಬ್ರಹ್ಮಕಲಶೋತ್ಸವದಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ. ಇದೀಗ ಬಂಟರ ಯಾನೆ ನಾಡವರ ಮಾತೃಸಂಘದ ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗುವ ಮೂಲಕ ಜಾತಿ ಸಂಘನಟೆಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ. ಈ ಸಂಘದ ನಿರ್ದೇಶಕರುಗಳಾಗಿ ದಯಾನಂದ ರೈ ಮನವಳಿಕೆ ಗುತ್ತು, ಜಯಪ್ರಕಾಶ್ ರೈ ನೂಜಿಬೈಲು, ದುರ್ಗಾಪ್ರಸಾದ್ ರೈ ಕುಂಬ್ರ, ಸಾಜ ರಾಧಾಕೃಷ್ಣ ಆಳ್ವ, ಪುರಂದರ್ ರೈ ಮಿತ್ರಂಪಾಡಿ, ಜಯರಾಜ್ ಭಂಡಾರಿ ನೊಣಾಲು, ವಾಣಿ ಎಸ್ ಶೆಟ್ಟಿ ನೆಲ್ಯಾಡಿಯವರು ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here