ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅರಿಯಡ್ಕ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಅರಿಯಡ್ಕ ಇದರ ಆಶ್ರಯದಲ್ಲಿ ಚಿಣ್ಣರ ಕಲರವ -2022 ವಿವಿಧ ಕಾರ್ಯಕ್ರಮಗಳೊಂದಿಗೆ ದ.17ರಂದು ಅರಿಯಡ್ಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.
ಬೆಳಿಗ್ಗೆ ಪಯಂದೂರು ಶ್ರೀ ಉಳ್ಳಾಕುಲು ದೈವಸ್ಥಾನದ ಆಡಳಿತ ಮೊಕ್ತೇಸರ ಎ.ಕೆ ರೈ ಅರಿಯಡ್ಕ ಧ್ವಜಾರೋಹಣ ಮಾಡಲಿದ್ದು ಬಳಿಕ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಹಿರಿಯ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ಸಹಭೋಜನ ಬಳಿಕ ಅಂಗನವಾಡಿ ಮತ್ತು ಶಾಲಾ ವಿದ್ಯಾರ್ಥಿಗಳಿಂದ ಕಾರ್ಯಕ್ರಮ ವೈವಿಧ್ಯ ನಡೆಯಲಿದೆ. ಸಂಜೆ ಸಭಾ ಕಾರ್ಯಕ್ರಮ ನಡೆಯಲಿದ್ದು ಅರಿಯಡ್ಕ ಗ್ರಾಪಂ ಅಧ್ಯಕ್ಷೆ ಸೌಮ್ಯ ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಲಿದ್ದು ಪ್ರಶಸ್ತಿ ಪುರಸ್ಕೃತ ಶಿಕ್ಷಕ ಇಬ್ರಾಹಿಂರವರಿಗೆ ಸನ್ಮಾನ ಕಾರ್ಯಕ್ರಮ, ಬಹುಮಾನ ವಿತರಣೆ ನಡೆಯಲಿದೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಾತ್ರಿ ಶ್ರೀವಾರಿ ಮ್ಯೂಸಿಕಲ್ಸ್ ಬದಿಯಡ್ಕ ಇವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಶಿಕ್ಷಣ ಪ್ರೇಮಿಗಳು, ಹಿರಿಯ ವಿದ್ಯಾರ್ಥಿಗಳು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಸ್.ಡಿ.ಎಂ.ಸಿ ಅಧ್ಯಕ್ಷ ಮಹಮ್ಮದ್ ಹನೀಫ್ ಪಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ರೈ ಜಾರತ್ತಾರು, ಶಾಲಾ ಮುಖ್ಯಗುರು ಜಯಂತಿ ಎನ್, ಹಿರಿಯ ವಿದ್ಯಾರ್ಥಿ ಸಂಘದ ಪ್ರ.ಕಾರ್ಯದರ್ಶಿ ಇಬ್ರಾಹಿಂ ಎ.ಆರ್, ಶಾಲಾ ವಿದ್ಯಾರ್ಥಿ ನಾಯಕಿ ಆಯಿಷತ್ ಸಂಸೀನಾ ಹಾಗೂ ಎಸ್ಡಿಎಂಸಿ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರುಗಳು, ಶಿಕ್ಷಕ ವೃಂದ ಹಾಗೂ ಪೋಷಕ ಬಳಗದ ಪ್ರಕಟಣೆ ತಿಳಿಸಿದೆ.