ಕೆಮ್ಮಾಯಿ ಕೃಷ್ಣನಗರ ಸ.ಉ.ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ

0

ಪುತ್ತೂರು: ಕೆಮ್ಮಾಯಿ ಕೃಷ್ಣನಗರದಲ್ಲಿರುವ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಡಿ.16ರಂದು ಸನ್ಮಾನ, ಪ್ರತಿಭಾಪುರಸ್ಕಾರ ಹಾಗು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆರಂಭಗೊಂಡಿತ್ತು.


ಬೆಳಿಗ್ಗೆ ಶಾಲಾ ಎಸ್‌ಡಿಎಂಸಿಅಧ್ಯಕ್ಷ ಕೆ.ಗೋಪಾಲ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭಾ ಸದಸ್ಯರಾದ ಲೀಲಾವತಿ, ಸುಂದರ ಪೂಜಾರಿ ಬಡಾವು, ಮಾಜಿ ಅಧ್ಯಕ್ಷ ನೆಲ್ಲಿಕಟ್ಟೆ ಜಗದೀಶ್ ಶೆಟ್ಟಿ, ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಶಾಲಾ ಸಂಸ್ಥಾಪಕ ವಿಜಯ ಹೇಮಚಂದ್ರ ಆಳ್ವ, ಕೋಡಿಂಬಾಡಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಅಶ್ರಫ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಕೆ.ಹರೀಶ್ ಆಚಾರ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಶಾಲಾ ಮುಖ್ಯ ಗುರು ಮರಿಯಮ್ಮ ಪಿ.ಎಸ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

ಚಿತ್ರ ಕೃಪೆ: ವಿಷ್ಣು ಸ್ಟುಡಿಯೋ

LEAVE A REPLY

Please enter your comment!
Please enter your name here