ನಿಡ್ಪಳ್ಳಿ: ಸರಕಾರಿ ಪ್ರೌಢಶಾಲೆ ಬೆಟ್ಟಂಪಾಡಿ ಇಲ್ಲಿ ನೂತನವಾಗಿ ನಿರ್ಮಿಸಿದ ವಿಜ್ಞಾನ ಪ್ರಯೋಗಾಲಯ ಕಟ್ಟಡವನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಡಿ.16 ರಂದು ಉದ್ಘಾಟಿಸಿದರು.
ಅಲ್ಲದೆ ಸರಕಾರದ ಶಿಕ್ಷಣ ಇಲಾಖೆ ಮುಖಾಂತರ ಶಾಸಕರು ಒದಗಿಸಿದ ಕುಡಿಯುವ ನೀರು ಯೋಜನೆ ಹಾಗೂ ಸ್ಮಾರ್ಟ್ ಕ್ಲಾಸ್ ನ ಉದ್ಘಾಟನೆಯನ್ನು ಕೂಡ ಈ ಸಂದರ್ಭದಲ್ಲಿ ಉದ್ಘಾಟಿಸಿ ಮಾತನಾಡಿದರು.
ರಸ್ತೆ ಡಾಮರಿಗೆ ಶಂಕುಸ್ಥಾಪನೆ
ಪ್ರೌಢ ಶಾಲೆಯ ಬಹುಕಾಲದ ಬೇಡಿಕೆಯಾದ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಮರೀಕರಣಕ್ಕೆ ಕೂಡ ಶಂಕುಸ್ಥಾಪನೆ ನೆರವೇರಿಸಿದರು. ಈ ರಸ್ತೆ ಅಭಿವೃದ್ಧಿಗೆ ಶಾಸಕರು 5 ಲಕ್ಷ ಅನುದಾನವನ್ನು ಒದಗಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್,ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪವಿತ್ರ ಡಿ,ಉಪಾಧ್ಯಕ್ಷ ವಿನೋದ್ ಕುಮಾರ್ ರೈ, ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ.ಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್,ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ,ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಗೋಪಾಲ ಗೌಡ, ಪಂಚಾಯತ್ ಸದಸ್ಯರು, ಎಸ್.ಡಿ.ಎಂ.ಸಿ ಸದಸ್ಯರು, ಸಹಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.
ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಸುಂದರ ನಾಯಕ ಬಾಳೆಗುಳಿ ಸ್ವಾಗತಿಸಿ ಮುಖ್ಯ ಶಿಕ್ಷಕ ವಿಜಯ ಕುಮಾರ್. ಎಂ ವಂದಿಸಿದರು. ಸಹಶಿಕ್ಷಕರು ಸಹಕರಿಸಿದರು.