ಶಾಂತಿನಗರ ಶಾಲಾ ರಜತ ಮಹೋತ್ಸವ-ಧ್ವಜಾರೋಹಣ

0

ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತಟ್ಟು ಗ್ರಾಮದ ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯ ರಜತ ಮಹೋತ್ಸವದ ಧ್ವಜಾರೋಹಣ, ಉದ್ಘಾಟನೆ ಡಿ.೧೭ರಂದು ಬೆಳಿಗ್ಗೆ ನಡೆಯಿತು.


ರಜತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ವೆಂಕಪ್ಪ ಗೌಡ ಪೆರ್ಲರವರು ಧ್ವಜಾರೋಹಣ ನೆರವೇರಿಸಿದರು. ನಿವೃತ್ತ ತಹಶೀಲ್ದಾರ್ ಕೃಷ್ಣಪ್ಪ ಪೂಜಾರಿ ಡೆಂಬಲೆರವರು ಉದ್ಘಾಟಿಸಿದರು. ಮೂಡಬಿದ್ರೆ ಆಳ್ವಾಸ್ ಇನ್ಸ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಅಜಿತ್‌ಕುಮಾರ್ ಪಾಲೇರಿ ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿದ್ದ ಬಜತ್ತೂರು ಕ್ಲಸ್ಟರ್‌ನ ಸಿಆರ್‌ಪಿ ಮಂಜುನಾಥ ಕೆ.ವಿ., ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ.ಟ್ರಸ್ಟ್ ದ.ಕ.ಜಿಲ್ಲೆ ನಿರ್ದೇಶಕ ಪ್ರವೀಣ್ ಕುಮಾರ್, ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಪುಷ್ಪಾವತಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಶಾಲಪ್ಪ ನಾಯ್ಕ್ ನೂಜೋಲು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಾಂತಿನಗರ ಒಕ್ಕೂಟದ ಅಧ್ಯಕ್ಷೆ ರತಿದಾಮೋದರ, ಶಾಂತಿನಗರ ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರತಾಪ್‌ಚಂದ್ರ ರೈಯವರು ಶುಭಹಾರೈಸಿದರು.
ರಜತ ಮಹೋತ್ಸವ ಸಮಿತಿ ಅಧ್ಯಕ್ಷ ರವೀಂದ್ರ ಕಾಂಚನ, ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗುರುಂಪು, ಶಾಂತಿನಗರ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷ ಯಶೋಧರ ಶಾಂತಿನಗರ, ಶಾಂತಿನಗರ ಆದರ್ಶ ಯುವಕ ಮಂಡಲದ ಅಧ್ಯಕ್ಷ ಜಯಂತ ಅರ್ತಿಗುಳಿ, ಮುರಿಯೇಲು ಯುವಶಕ್ತಿ ಗೆಳೆಯರ ಬಳಗದ ಅಧ್ಯಕ್ಷ ಪವನ್‌ಕುಮಾರ್ ರೈ ಕುದ್ಮಾರುಗುತ್ತು, ಹಿಂಜಾವೇ ಮತ್ತು ಭಜರಂಗದಳ ಶಾಂತಿನಗರ ಘಟಕದ ಅಧ್ಯಕ್ಷ ನೇಮಣ್ಣ ಎಸ್.ಬಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಪ್ರದೀಪ್ ಬಾಕಿಲ ಸ್ವಾಗತಿಸಿ, ಮಹೇಶ್ ಆಲಂತಾಯ ವಂದಿಸಿದರು. ಶಿಕ್ಷಕ ಮಂಜುನಾಥ ಮಣಕವಾಡ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಮತ್ತು ಊರವರಿಂದ ಛದ್ಮವೇಷ ಸ್ಪರ್ಧೆ ನಡೆಯಿತು. ಮಧ್ಯಾಹ್ನ ಸಹಭೋಜನ ನಡೆಯಿತು.

 

LEAVE A REPLY

Please enter your comment!
Please enter your name here