ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

0

ರಾಮಕುಂಜ: ಕಾಲೇಜಿನ ಸರ್ವತೋಮುಖ ಬೆಳವಣಿಗೆಗೆ ಎಲ್ಲರೂ ಕಟಿಬದ್ಧರಾಗಬೇಕು. ರಾಮಕುಂಜದಂತಹ ಗ್ರಾಮೀಣ ಪ್ರದೇಶಗಳಲ್ಲಿರುವ ಕಲಿಕೆಗೆ ಪೂರಕವಾದ ವಾತಾವರಣವನ್ನು ಪೋಷಕರು ಮತ್ತು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ದಿವಾಕರ ರಾವ್ ಹೇಳಿದರು.

ಅವರು ಕಾಲೇಜಿನ ೨೦೨೨-೨೩ನೇ ಸಾಲಿನ ರಕ್ಷಕ – ಶಿಕ್ಷಕ ಸಂಘದ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಉಪಾಧ್ಯಕ್ಷ ಅಬ್ದುಲ್ ರಜಾಕ್, ಪ್ರಾಂಶುಪಾಲ ಗಣರಾಜ ಕುಂಬ್ಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಸವಿತಾ ವರದಿ ವಾಚಿಸಿ ಹಾಗೂ ಲೆಕ್ಕಪತ್ರ ಮಂಡಿಸಿದರು. ೨೦೨೨-೨೩ನೇ ಸಾಲಿಗೆ ಸಂಘದ ಅಧ್ಯಕ್ಷರಾಗಿ ಸುಂದರ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ತೇಜಸ್ವಿನಿ ಕಟ್ಟಪುಣಿ ಅವರನ್ನು ಆಯ್ಕೆ ಮಾಡಲಾಯಿತು. ಪ್ರಾಂಶುಪಾಲರು ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಮಾಹಿತಿ ನೀಡಿದರು. ರಕ್ಷಾ ಪ್ರಾರ್ಥಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಸವಿತಾ ಸ್ವಾಗತಿಸಿದರು. ಉಪನ್ಯಾಸಕ ದಿವಾಕರ. ಕೆ. ವಂದಿಸಿದರು. ಉಪನ್ಯಾಸಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಪೋಷಕರ ಜೊತೆಗೆ ಕಾಲೇಜಿನ ಉಪನ್ಯಾಸಕರೂ ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here